ETV Bharat / state

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮುನ್ನೆಚ್ಚರಿಕೆ ವಹಿಸುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ - Minister Ramesh Jarkiholi news

ಕ್ವಾರಂಟೈನ್ ಇರುವವರನ್ನು ವರದಿ ಬರುವ ಮುಂಚೆಯೇ ಮನೆಗೆ ಕಳಿಸಿದ್ದರಿಂದ ಕೆಲವು ಭಾಗಗಳಲ್ಲಿ ಸೋಂಕು ಹರಡಿದೆ. ಇದೀಗ ತಪಾಸಣೆ ಕಡಿಮೆಗೊಳಿಸಿದರೆ ಸೋಂಕು ಮತ್ತಷ್ಟು ಹರಡುವ ಸಾಧ್ಯತೆ ಇದೆ ಎಂದು ಸತೀಶ್​ ಜಾರಕಿಹೊಳಿ ಹೇಳಿದರು.

minister-ramesh-jarkiholi
ಪ್ರವಾಹ ಮುನ್ನೆಚ್ಚರಿಕೆ ವಹಿಸಲು ಸಚಿವ ರಮೇಶ್ ಜಾರಕಿಹೊಳಿ ಸೂಚನೆ
author img

By

Published : Jun 5, 2020, 6:49 PM IST

ಬೆಳಗಾವಿ: ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಅಧಿಕಾರಿಗಳು ಈಗೀನಿಂದಲೇ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಲ ಸಂಪನ್ಮೂಲ ಹಾಗೂ ನೂತನ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಕೋವಿಡ್-19 ನಿಯಂತ್ರಣ ಹಾಗೂ ನೆರೆ ಹಾವಳಿ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೆರೆ ಹಾವಳಿಗೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯಮಟ್ಟದಲ್ಲಿ ಉನ್ನತಮಟ್ಟದ ಸಮಿತಿ ರಚನೆಗೆ ಕ್ರಮ‌ ಕೈಗೊಳ್ಳುವ ಮೂಲಕ ನೆರೆ ಹಾವಳಿ ಸವಾಲು ಎದುರಿಸಲು ಸರ್ಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಬಳ್ಳಾರಿ ನಾಲಾದಿಂದ ಕಳೆದ ಬಾರಿ ದೊಡ್ಡ ಅನಾಹುತ ಆಗಿದೆ. ಆದ್ದರಿಂದ ಬೃಹತ್ ಹಿಟಾಚಿ ಬಳಸಿಕೊಂಡು ನಾಲಾ ಸ್ವಚ್ಛತೆ ಕೈಗೊಳ್ಳಬೇಕು. ನಾಲಾ ಅತಿಕ್ರಮಣ ತೆರವುಗೊಳಿಸುವುದಕ್ಕೆ ಸಂಬಂಧಿಸಿದಂತೆ ಸರ್ವೆ ಕಾರ್ಯ ಮುಂದುವರಿಸಬೇಕು ಎಂದರು

ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಮಾತನಾಡಿ, ಕ್ವಾರಂಟೈನ್ ಇರುವವರನ್ನು ವರದಿ ಬರುವ ಮುಂಚೆಯೇ ಮನೆಗೆ ಕಳಿಸಿದ್ದರಿಂದ ಕೆಲವು ಭಾಗಗಳಲ್ಲಿ ಸೋಂಕು ಹರಡಿದೆ. ಇದೀಗ ತಪಾಸಣೆ ಕಡಿಮೆಗೊಳಿಸಿದರೆ ಸೋಂಕು ಮತ್ತಷ್ಟು ಹರಡುವ ಸಾಧ್ಯತೆಯಿದೆ. ಆದ್ದರಿಂದ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಅಲ್ಲದೇ ಮಳೆಗಾಲ ಆರಂಭಗೊಂಡಿರುವುದರಿಂದ ರೈತರು ಹಾಗೂ ವರ್ತಕರ ಹಿತದೃಷ್ಟಿಯಿಂದ ಎಪಿಎಂಸಿ ವಹಿವಾಟು ಒಂದೇ ಕಡೆ ಆರಂಭಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಬೊಮ್ಮನಹಳ್ಳಿ ಮಾತನಾಡಿ, ಕೊರೊನಾಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 97 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 1411 ಮಾದರಿಗಳ ವರದಿ ಬರಬೇಕಿದೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 48 ಕಂಟೈನ್ಮೆಂಟ್ ಝೋನ್ ಘೋಷಣೆ ಮಾಡಲಾಗಿದ್ದು, 9 ಡಿನೋಟಿಫೈ ಮಾಡಲಾಗಿರುತ್ತದೆ. ಸದ್ಯಕ್ಕೆ ಇನ್ನೂ 39 ಕಂಟೈನ್ಮೆಂಟ್ ಝೋನ್​ಗಳಿವೆ ಎಂದು ವಿವರಿಸಿದರು.

ಕಳೆದ ಬಾರಿಯ ಪ್ರವಾಹ ಸ್ಥಿತಿಗತಿ ಅಧ್ಯಯನ ನಡೆಸಿ, ಈ ಬಾರಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮುಂಗಾರು ಶೇ. 256ರಷ್ಟು ಹೆಚ್ಚಾಗಿದ್ದು, ಬೀಜ-ಗೊಬ್ಬರ ವಿತರಣೆಗೆ ಕ್ರಮ ವಹಿಸಲಾಗಿದೆ. ಪ್ರವಾಹ ನಿರ್ವಹಣೆಗೆ ತಾಲೂಕುಮಟ್ಟದ ಟಾಸ್ಕ್​ ಫೋರ್ಸ್ ಸಭೆ ನಡೆಸಲು ಸೂಚನೆ ನೀಡಲಾಗಿದೆ ಎಂದರು.

ಇದೇ ವೇಳೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಬಿಡುಗಡೆಗೊಳಿಸಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.