ಬೆಳಗಾವಿ: ರಾಷ್ಟ್ರೀಯವಾದಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ ಖಂಡನೀಯ. ಇದು ಮಾಧ್ಯಮದ ಮುಕ್ತ ನಿರ್ವಹಣೆಗೆ ಬಿದ್ದ ಪೆಟ್ಟು ಎಂದು ಸಚಿವ ರಮೇಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ಈ ನಡೆ ಅಧಿಕಾರದ ದುರುಪಯೋಗಕ್ಕೆ ಕಾರಣವಾಗಿದ್ದು, ಮುಕ್ತ ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ. ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ತುರ್ತು ಪರಿಸ್ಥಿತಿ ನೆನಪಿಸುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮದ ಮೇಲೆ ಈ ರೀತಿಯ ದಾಳಿಯನ್ನು ಪ್ರತಿಯೊಬ್ಬರೂ ವಿರೋಧಿಸಬೇಕು ಎಂದ್ರು.
ಅರ್ನಬ್ ಗೋಸ್ವಾಮಿ ಬಂಧನವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.