ಚಿಕ್ಕೋಡಿ: ನ್ಯಾಯಬೆಲೆ ಅಂಗಡಿಗೆ ಸಚಿವೆ ಶಶಿಕಲಾ ಜೊಲ್ಲೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ಜನವಾಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನ್ಯಾಯಬೆಲೆ ಅಂಗಡಿಗೆ ಅಧಿಕಾರಿಗಳೊಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಿಗದಿತ ಸಮಯದಲ್ಲಿ ಪಡಿತರ ವಿತರಿಸಲು ನ್ಯಾಯಬೆಲೆ ಅಂಗಡಿಯ ಸಿಬ್ಬಂದಿಗೆ ಸೂಚಿಸಿದರು.
ಗ್ರಾಮದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು, ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಪಡಿತರ ಪಡೆಯಬೇಕು. ನ್ಯಾಯಾಬೆಲೆ ಅಂಗಡಿಯಿಂದ ಏನಾದರು ತೊಂದರೆ ಆಗುತ್ತಿದ್ದರೆ ನನ್ನ ಗಮನಕ್ಕೆ ತನ್ನಿ ಎಂದು ಸಾರ್ವಜನಿಕರಿಗೆ ತಿಳಿಸಿದರು.