ETV Bharat / state

ಮೆಕ್ಕೆಜೋಳ ಘಟಕದಲ್ಲಿ ಮೃತಪಟ್ಟ ಕಾರ್ಮಿಕರಿಗೆ ಪರಿಹಾರ ಹೆಚ್ಚಿಸುವ ಕುರಿತು ಸಿಎಂ ಜೊತೆ ಚರ್ಚೆ: ಸಂತೋಷ್ ಲಾಡ್ - ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪುರ ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ ಮೃತಪಟ್ಟ ಕಾರ್ಮಿಕರಿಗೆ ಪರಿಹಾರ ಹೆಚ್ಚಿಸುವ ಕುರಿತು ಸಿಎಂ ಜೊತೆ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್
ಕಾರ್ಮಿಕ ಸಚಿವ ಸಂತೋಷ್ ಲಾಡ್
author img

By ETV Bharat Karnataka Team

Published : Dec 7, 2023, 8:10 PM IST

ವಿಧಾನ ಪರಿಷತ್ ಕಲಾಪ

ಬೆಂಗಳೂರು: ವಿಜಯಪುರ ಜಿಲ್ಲೆಯ ಖಾಸಗಿ ಕಂಪನಿಯ ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಪರಿಹಾರ ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಇಂದು ಬಿಜೆಪಿ ಸದಸ್ಯ ರವಿಕುಮಾರ್ ವಿಷಯ ಪ್ರಸ್ತಾಪಿಸಿ, ವಿಜಯಪುರ ಜಿಲ್ಲೆಯ ಖಾಸಗಿ ಕಂಪೆನಿಯ ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ ಸುಮಾರು 160ಕ್ಕಿಂತ ಹೆಚ್ಚು ವಲಸೆ ರಾಜ್ಯಗಳ ಕಾರ್ಮಿಕರು ಹಗಲು-ರಾತ್ರಿ ಎನ್ನದೇ ಅತ್ಯಂತ ಕಡಿಮೆ ಕೂಲಿಯಲ್ಲಿ ಕೆಲಸ ಮಾಡುತ್ತಿದ್ದರು. ಮೊನ್ನೆ ಏಕಾಏಕಿ ಗೋದಾಮಿನ ಭಾರ ಕುಸಿತದಿಂದ ಸಂಸ್ಕರಣಾ ಘಟಕದ ಸ್ಪಕ್ಟರ್ ಅಡಿ 7 ಜನ ಕಾರ್ಮಿಕರು ಸಿಲುಕಿ ಜೀವನ್ಮರಣದ ನಡುವೆ ಹೋರಾಟ ನಡೆಸಿ, ಮರಣ ಹೊಂದಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ.

ಈ ಘಟನೆಗೆ ಕಂಪನಿಯ ಮಾಲೀಕರು ಹಾಗೂ ಕಾರ್ಮಿಕ ಇಲಾಖೆ ಮತ್ತು ಕೈಗಾರಿಕೆ ಇಲಾಖೆಗಳೇ ನೇರ ಹೊಣೆಯಾಗಿವೆ. ರಾಜ್ಯದಲ್ಲಿ ಕಾರ್ಖಾನೆಗಳಿಗೆ ಅನುಮತಿ ನೀಡಿದ ನಂತರ ಮತ್ತೆ ಸಂಬಂಧಪಟ್ಟ ಇಲಾಖೆಗಳು ಕಾರ್ಖಾನೆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ, ಕಾರ್ಖಾನೆಗಳಲ್ಲಿ ಕಾರ್ಮಿಕರ ರಕ್ಷಣೆ, ಕೆಲಸದ ಸಮಯ, ಕನಿಷ್ಟ ವೇತನ, ಮೂಲಸೌಕರ್ಯ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಪರಿಶೀಲನೆ ಮಾಡಬೇಕಿತ್ತು. ಆದರೆ ಇಲಾಖೆಗಳು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದೇ ಈ ಘಟನೆಯೇ ಸಾಕ್ಷಿ ಎನ್ನಬಹುದು. ಸರ್ಕಾರ ಮೃತರಿಗೆ ಕೇವಲ 2 ಲಕ್ಷ ರೂ. ಪರಿಹಾರ ಘೋಷಿಸಿರುವುದು ಸರಿಯಲ್ಲ. ಆ ಬಡ ಜೀವಗಳಿಗೆ ಬೆಲೆ ಇಲ್ಲವೇ?. ಸರ್ಕಾರ ಕನಿಷ್ಟ 5 ಲಕ್ಷ ರೂ ಮೃತರಿಗೆ ಪರಿಹಾರ ನೀಡಬೇಕು ಮತ್ತು ಕಂಪನಿಯಿಂದ 5 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಇಂತಹ ದುರ್ಘಟನೆಗಳು ಕಾರ್ಖಾನೆಗಳಲ್ಲಿ ಜರುಗದಂತೆ ಕಾರ್ಮಿಕ ಇಲಾಖೆ ಮತ್ತು ಕೈಗಾರಿಕಾ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಕಂಪನಿಗಳಲ್ಲಿ ಕಾರ್ಮಿಕರ ರಕ್ಷಣೆಯ ಬಗ್ಗೆ ಕೂಡಲೇ ಪರಿಶೀಲಿಸಬೇಕು. ನಿರ್ಲಕ್ಷ್ಯ ವಹಿಸುವ ಕಂಪನಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ, ಕಂಪೆನಿಗಳನ್ನು ಮುಚ್ಚಲು ಸೂಚಿಸಬೇಕು ಎಂದು ಒತ್ತಾಯಿಸಿದರು.

ರವಿಕುಮಾರ್ ಪ್ರಸ್ತಾಪಕ್ಕೆ ಉತ್ತರಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, 35 ಟನ್ ಇರುವ ಮೆಕ್ಕೆಜೋಳ ಕುಸಿದುಬಿದ್ದು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈಗ ಸರ್ಕಾರದಿಂದ 2 ಲಕ್ಷ ಪರಿಹಾರ ನೀಡಿದ್ದೇವೆ. ಸಿಎಂ ಜೊತೆ ಮಾತುಕತೆ ನಡೆಸಿ ಪರಿಹಾರ ಹೆಚ್ಚಿಸುವ ಬಗ್ಗೆ ಪರಿಶೀಲಿಸುತ್ತೇವೆ. ಕಂಪೆನಿಯವರಿಗೂ ಪರಿಹಾರ ನೀಡುವಂತೆ ನಮ್ಮ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ರೀತಿಯ ಘಟನೆ ಮುಂದೆ ಆಗದಂತೆ ಎಚ್ಚರವಹಿಸುತ್ತೇವೆ ಎಂದು ಭರವಸೆ ನೀಡಿದರು.

ಸಿಎಂ ಭರವಸೆ ಪ್ರಜಾಪ್ರಭುತ್ವ ಆಶಯಕ್ಕೆ ವಿರುದ್ಧ: ಎಸ್ಇಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿಗೆ ಬಳಸಿಕೊಂಡು ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಮಾಡಿ ಈಗ ಅಲ್ಪಸಂಖ್ಯಾತರ ಓಲೈಕೆಗಾಗಿ ಅವರಿಗೆ 10 ಸಾವಿರ ಕೋಟಿ ರೂ ಅನುದಾನದ ಭರವಸೆ ನೀಡಿ ಎಸ್ಸಿ ಎಸ್ಟಿ, ಒಬಿಸಿ ಕಡೆಗಣಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮಾವೇಶದಲ್ಲಿ ಮಾತನಾಡುವ ವೇಳೆ ದೇಶದ ಸಂಪತ್ತನ್ನು ನಿಮಗೆ ಹಂಚುತ್ತೇನೆ ಹಾಗೂ 10 ಕೋಟಿ ನಿಮಗೆ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಯಾವುದೇ ಸಮುದಾಯಕ್ಕೆ ಹಣ ಮೀಸಲಿಟ್ಟರೆ ಯಾರದ್ದೇ ವಿರೋಧವಿಲ್ಲ. ಆದರೆ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತ ಸಮುದಾಯಕ್ಕೆ 10,000 ಕೋಟಿ ನೀಡುತ್ತೇನೆ ಎಂದಿದ್ದಾರೆ.

ಆದರೆ ಪರಿಶಿಷ್ಠ ಜಾತಿ-ಪಂಗಡಗಳಿಗೆ ಮೀಸಲಿಟ್ಟ 11,500 ಕೋಟಿ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿ, ಸಮಾಜದ ಕಟ್ಟಕಡೆಯ ಬಡ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಸರ್ವರನ್ನೊಳಗೊಂಡ ಸಮಾಜ ನಿರ್ಮಾಣ ಮಾಡುವ ಭರವಸೆ ನೀಡಿರುವ ಸಿದ್ದರಾಮಯ್ಯವರು, ಒಂದು ವರ್ಗವನ್ನು ಓಲೈಸುವ ಭರದಲ್ಲಿ ಸಮಾಜದ ಪರಿಶಿಷ್ಠ ಜಾತಿ, ಹಿಂದುಳಿದ ವರ್ಗದ ಬಡವರನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು.

ಹಣ ಬಿಡುಗಡೆ ಮಾಡದೇ ಅನ್ಯಾಯ: ದುರಾದೃಷ್ಟವೆಂದರೆ, ಹಿಂದುಳಿದ ವರ್ಗಗಳ ಹಾಗೂ ಪರಿಶಿಷ್ಠ ಜಾತಿ-ಪಂಗಡಗಳಿಗೆ ಸೇರಿದ ವಸತಿ ನಿಲಯಗಳಲ್ಲಿನ ಸಾವಿರಾರು ಬಡ ಮಕ್ಕಳು ಹಾಸ್ಟೆಲ್‌ಗಳ ಪ್ರವೇಶ ದೊರಕದೆ, ಸೌಲಭ್ಯ ವಂಚಿತರಾಗಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವಿಲ್ಲದೆ ಪರದಾಡುತ್ತಿದ್ದಾರೆ. 10,000 ಮಹಿಳೆಯರಿಗೆ ಹೊಲಿಗೆ ಯಂತ್ರ ಮಂಜೂರಾಗಿದ್ದರೂ ಬಡ ನಿರುದ್ಯೋಗಿಗಳಿಗೆ, ಮಹಿಳೆಯರಿಗೆ ನೀಡದೇ ಸತಾಯಿಸುವ ಕೆಲಸವಾಗುತ್ತಿದೆ. 471 ಹಿಂದುಳಿದ ವರ್ಗಗಳ ಸಮುದಾಯ ಭವನಗಳಿಗೆ ಅನುದಾನ ಮಂಜೂರಾಗಿ ಆದೇಶವಾಗಿದ್ದರೂ ಹಣ ಬಿಡುಗಡೆ ಮಾಡದೇ ಅನ್ಯಾಯ ಮಾಡಲಾಗುತ್ತಿದೆ.

ಪರಿಶಿಷ್ಟ ವರ್ಗಗಳಿಗೆ ಮೀಸಲಿರಿಸಿರುವ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದರಿಂದ, ಪರಿಶಿಷ್ಠ ವರ್ಗಗಳ ಬಡ ಜನರ ಆರೋಗ್ಯ ಮತ್ತು ಶಿಕ್ಷಣದ ಮೇಲೆ ದುಷ್ಪರಿಣಾಮ ಬೀರಲಿದೆ. ಇಂತಹ ಒಂದು ಜಾತ್ಯಾತೀತ ಸರ್ಕಾರ ಎಂದುಕೊಳ್ಳುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ರಾಜಕಾರಣಕ್ಕಾಗಿ ಕೇವಲ ಒಂದು ಧರ್ಮದ ಓಲೈಕೆಗಾಗಿ 10,000 ಕೋಟಿ ನೀಡುವುದಾಗಿ ಹೇಳುತ್ತಿರುವುದು ಮತ್ತು ಉಳಿದೆಲ್ಲಾ ಹಿಂದುಳಿದ ವರ್ಗಗಳನ್ನು ಹಾಗೂ ಪರಿಶಿಷ್ಟರನ್ನು ನಿರ್ಲಕ್ಷಿಸುತ್ತಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ಆತಂಕಕಾರಿಯಾಗಿದೆ. ಈ ಕುರಿತು ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಭಾನಾಯಕ ಬೋಸರಾಜ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಉತ್ತರ ಕೊಡಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ರೈತರಿಗೆ 2 ಲಕ್ಷ ರೂ.ವರೆಗೆ ಸಾಲಮನ್ನಾ, ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ: ಆರ್‌.ಅಶೋಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.