ETV Bharat / state

ವಿಡಿಯೋ ಸಂಭಾಷಣೆ ಮೂಲಕ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವೆ ಶಶಿಕಲಾ ಜೊಲ್ಲೆ - ಚಿಕ್ಕೋಡಿ ಸುದ್ದಿ

ರಾಷ್ಟ್ರೀಯ ಪೋಷಣಾ ಅಭಿಯಾನ ಅಡಿ ರಾಜ್ಯದಲ್ಲಿ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್​ಗಳನ್ನು ವಿತರಿಸಲಾಗಿದೆ. ಅದರ ಬಳಕೆ ಕುರಿತು ಕಾರ್ಯಕ್ರಮದಲ್ಲಿ ಸಮಾಲೋಚನೆ ನಡೆಸಲಾಯಿತು..

Shashikala Jolle
ಸಚಿವೆ ಶಶಿಕಲಾ ಜೊಲ್ಲೆ
author img

By

Published : Oct 6, 2020, 6:01 PM IST

ಚಿಕ್ಕೋಡಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಿಡಿಯೋ ಸಂಭಾಷಣೆ ಮೂಲಕ ಜಿಲ್ಲೆಯ ಉಪನಿರ್ದೇಶಕರೊಂದಿಗೆ ಸಭೆ ನಡೆಸಿದ್ದಾರೆ.

2020-21ನೇ ಸಾಲಿನಲ್ಲಿ ಇಲಾಖೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಾರ್ಯಕ್ರಮ ಯೋಜನೆಗಳ ಕುರಿತು ಬೆಂಗಳೂರಿನಲ್ಲಿ ನಡೆದ ಸಭೆಗೆ ಹಾಜರಾಗಲು ಸಾಧ್ಯವಾಗದ ಕಾರಣ, ಪ್ರಯಾಣ ಮಾಡುವ ಸಂದರ್ಭದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಜಿಲ್ಲೆಯ ಉಪನಿರ್ದೇಶಕರೊಂದಿಗೆ ಮೊಬೈಲ್ ಮೂಲಕ ವಿಡಿಯೋ ಸಂಭಾಷಣೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದ್ದಾರೆ.

ರಾಷ್ಟ್ರೀಯ ಪೋಷಣಾ ಅಭಿಯಾನ ಅಡಿ ರಾಜ್ಯದಲ್ಲಿ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್​ಗಳನ್ನು ವಿತರಿಸಲಾಗಿದೆ. ಅದರ ಬಳಕೆ ಕುರಿತು ಕಾರ್ಯಕ್ರಮದಲ್ಲಿ ಸಮಾಲೋಚನೆ ನಡೆಸಲಾಯಿತು.

ಇಲಾಖೆಯಡಿಯಲ್ಲಿ ಬರುವ ಎಲ್ಲಾ ಕಾರ್ಯಕ್ರಮಗಳು ಹಾಗೂ ಇತರ ಮಾಹಿತಿಗಳನ್ನು ನೀಡಲಾದ ಸ್ಮಾರ್ಟ್​ ಫೋನ್‌ಗಳಲ್ಲೇ ಅಪ್​ಲೋಡ್​ ಮಾಡಬೇಕೆಂಬ ವಿಷಯಗಳ ಕುರಿತು ಎಲ್ಲಾ ಜಿಲ್ಲೆಯ ಉಪನಿರ್ದೇಶಕರಿಗೆ ಆದೇಶಿಸಲಾಗಿದೆ. ಈ ಬಗ್ಗೆ ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತೆಂದು ಸಚಿವೆ ಶಶಿಕಲಾ ಜೊಲ್ಲೆ ಈಟಿವಿ ಭಾರತ ಜೊತೆ ಮಾಹಿತಿ ಹಂಚಿಕೊಂಡರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.