ETV Bharat / state

ಕೋವಿಡ್​​ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಿ: ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

author img

By

Published : Aug 11, 2020, 5:19 PM IST

ನಗರದ ಪ್ರವಾಸಿ ಮಂದಿರದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Meeting
Meeting

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಹಮ್ಮಿಕೊಂಡ ಸಭೆಯ ಅಧ್ಯಕ್ಷತೆಯಲ್ಲಿ ಮಾತನಾಡಿದ ಅವರು, ರ್ಯಾಪಿಡ್ ಟೆಸ್ಟ್ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡು ಬಂದರೆ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ ತರಬೇಕು ಎಂದರು.

ಖಾಸಗಿ ಆಸ್ಪತ್ರೆಯವರು ಕೂಡ ಕೋವಿಡ್ ಹಾಗೂ ಇತರೆ ಚಿಕಿತ್ಸೆ ನೀಡಲು ಮುಂದೆ ಬರುತ್ತಿದ್ದು, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ವತಿಯಿಂದ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಬೇಕು. ಹಾಗೂ ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿದ ದರ ಪಟ್ಟಿಯ ಪ್ರಕಾರ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಿದರೆ ಆಯಾ ತಾಲೂಕು ಪ್ರದೇಶಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ಒದಗಿಸಬಹುದು ಎಂದರು.

ಪ್ರತಿ ತಾಲೂಕಿನಲ್ಲಿ ಖಾಸಗಿ ಆಸ್ಪತ್ರೆಗೆ ಅನುಮತಿ ನೀಡಲು ಸಲಹೆ:

ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಮಾತನಾಡಿ, ಅಥಣಿ ಸೇರಿದಂತೆ ಕೆಲವು ಕಡೆ ಖಾಸಗಿ ಆಸ್ಪತ್ರೆಗಳು ಕೂಡ ಕೋವಿಡ್ ಚಿಕಿತ್ಸೆಗೆ ಮುಂದಾಗುತ್ತಿದ್ದು, ಅಂತಹವರಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲು ಪರಿಶೀಲಿಸಬೇಕು. ಖಾಸಗಿ ಆಸ್ಪತ್ರೆಗೆ ಅನುಮತಿ ನೀಡಿದರೆ ಸರ್ಕಾರಿ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ. ಪ್ರತಿ ತಾಲೂಕಿಗೆ ಕನಿಷ್ಠ ಒಂದು ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ತಕ್ಷಣವೇ ಅನುಮತಿ ನೀಡಬೇಕು ಎಂದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾತನಾಡಿ, ಶೇ. 40ರಷ್ಟು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದ್ದು, ತಾಲೂಕುವಾರು ಸೋಂಕಿತರಿಗೆ ಆಯಾ ತಾಲೂಕು ಆಸ್ಪತ್ರೆ ಮತ್ತು ಕೇಂದ್ರಗಳಲ್ಲಿ ಆರೈಕೆ ಮಾಡಲಾಗುತ್ತಿದೆ ಎಂದರು.

ಪ್ರತಿದಿನ ರಾಜ್ಯಮಟ್ಟದಲ್ಲಿ ನಿಗದಿತ ಗುರಿಯಂತೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಇದಲ್ಲದೆ ತುರ್ತು ಚಿಕಿತ್ಸೆಗೆ ಅಗತ್ಯವಿದ್ದಾಗ ಸರ್ಕಾರಿ ವೈದ್ಯಕೀಯ ತಂಡ ಖಾಸಗಿ ಆಸ್ಪತ್ರೆಗೆ ತೆರಳಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ಯಾನೆಲ್​​ನಲ್ಲಿ ಇರುವ ಜಿಲ್ಲೆಯ 47 ಆಸ್ಪತ್ರೆಗಳಿಗೆ ಈಗಾಗಲೇ ನಿಗದಿಪಡಿಸಿದ ದರದಂತೆ ಬಿಲ್ ಪಾವತಿಸಲಾಗುವುದು. ಇದಲ್ಲದೆ ಚಿಕಿತ್ಸೆಗೆ ಮುಂದಾಗುವ ಇತರೆ ಖಾಸಗಿ ಆಸ್ಪತ್ರೆಗಳಿಗೂ ಮಾರ್ಗಸೂಚಿ ಅನುಸರಿಸಿ ಅನುಮತಿ ನೀಡಲಾಗುವುದು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.