ಚಿಕ್ಕೋಡಿ: ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮಂತ (ತಾತ್ಯಾ) ಪಾಟೀಲ್, ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಹಾಗೂ ಸುತ್ತಮುತ್ತಲಿನ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಗ್ರಾಮಸ್ಥರು, ಕಾರ್ಯಕರ್ತರು ಸಚಿವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಶಿರಗುಪ್ಪಿ ಗ್ರಾಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶ್ರೀಮಂತ ಪಾಟೀಲ, ಕಾಗವಾಡ ಕ್ಷೇತ್ರದ ಜನತೆಗೆ ಕೊಟ್ಟ ಭರವಸೆಯಂತೆ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದರು.
ರಸ್ತೆ, ಶಾಲೆ, ಕುಡಿಯುವ ನೀರು ಸೇರಿದಂತೆ ರೈತರ ಸಮಸ್ಯೆಗಳಿಗೆ ಬಗೆಹರಿಸುವುದಾಗಿ ಭರವಸೆ ನೀಡಿದರು.