ಚಿಕ್ಕೋಡಿ: ಕಾಗವಾಡ ಮತಕ್ಷೇತ್ರದ ಶಾಸಕ ಹಾಗೂ ಜವಳಿ ಮತ್ತು ಅಲ್ಪಸಂಖ್ಯಾತರ ಸಚಿವ ಶ್ರೀಮಂತ ಪಾಟೀಲ ಕೆಲ ದಿನಗಳ ಹಿಂದೆ ಉಪಚುನಾವಣೆಯಲ್ಲಿ ಭಾಗಿಯಾಗಿದ್ದರು. ಕೆಲ ಮುಖಂಡರಿಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ವೈದ್ಯರು ಕೆಲದಿನ ಹೋಮ್ ಕ್ವಾರಂಟೈನ್ ಆಗಲು ಸೂಚಿಸಿದ್ದಾರೆ. ಅವರ ಸಲಹೆಯಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹೋಮ್ ಕ್ವಾರಂಟೈನ್‌ದಲ್ಲಿರುವುದಾಗಿ ಈಟಿವಿ ಭಾರತಗೆ ಸಚಿವ ಶ್ರೀಮಂತ ಪಾಟೀಲ ತಿಳಿಸಿದ್ದಾರೆ.
ಏ.17ರಂದು ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಇದಕ್ಕೂ ಮುನ್ನ ಪ್ರಚಾರದಲ್ಲಿ ಭಾಗಿಯಾದ ಕೆಲ ಮುಖಂಡರಿಗೆ ಕೊರೊನಾ ದೃಢವಾದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ತಮ್ಮ ಸಂಪರ್ಕದಲ್ಲಿದ್ದವರು ಸಹಿತ ಹೋಮ್ ಕ್ವಾರಂಟೈನ್ ಆಗಿ. ನಾನೂ ಹೋಮ್ ಕ್ವಾರಂಟೈನ್ ಆಗುತ್ತಿದ್ದೇನೆ. ಕಾಗವಾಡ ಮತಕ್ಷೇತ್ರದ ಯಾವುದೇ ಕೆಲಸ ಕಾರ್ಯಗಳು ಇದ್ದರೆ ಫೋನ್ ಮುಖಾಂತರ ಮತ್ತು ನನ್ನ ಆಪ್ತ ಸಹಾಯಕರೊಂದಿಗೆ ಹಂಚಿಕೊಳ್ಳಿ ಎಂದು ಸಚಿವರು ಹೇಳಿದ್ದಾರೆ.
ಕೊರೊನಾ 2ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಯಾರೂ ಅನಾವಶ್ಯಕವಾಗಿ ಹೊರಗೆ ಹೋಗಬೇಡಿ. ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಓದಿ: ಬೆಳಗಾವಿ ಉಪಚುನಾವಣೆಯಲ್ಲಿ ಮಂಗಳಾ ಅಂಗಡಿ ಗೆಲುವು ನಿಶ್ಚಿತ: ಸಚಿವ ಶ್ರೀಮಂತ ಪಾಟೀಲ