ಬೆಳಗಾವಿ: ಸವದತ್ತಿ ತಾಲೂಕಿನ ಮುನವಳ್ಳಿಯ ಸಾವಿತ್ರಿ ಹುಲ್ಲೂರ ಎಂಬುವರ ಮನೆಗೆ ಭೇಟಿ ನೀಡಿದ ಸಚಿವ ಸೋಮಣ್ಣ, ವಿದ್ಯುತ್ ಮಗ್ಗಗಳು ಸಂಪೂರ್ಣ ಹಾನಿಗೊಳಗಾಗಿರುವುದನ್ನು ಪರಿಶೀಲಿಸಿ ಮಗ್ಗದ ಮಾಲೀಕರಿಗೆ 25 ಸಾವಿರ ರೂ. ಪರಿಹಾರದ ಚೆಕ್ ವಿತರಿಸಿದರು.
ಪ್ರತಿ ಮಗ್ಗಗಳಿಗೂ ತಲಾ 25 ಸಾವಿರ ಪರಿಹಾರ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಚಿವ ಸೋಮಣ್ಣ ಇದೇ ವೇಳೆ ಭರವಸೆ ನೀಡಿದರು. ಸವದತ್ತಿ ಶಾಸಕ ಆನಂದ ಮಾಮನಿ, ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.