ETV Bharat / state

ನಾವಿಕ ಸಮುದಾಯದವರಿಗೆ ದಿನಸಿ ಕಿಟ್ ವಿತರಿಸಿದ ಸಚಿವ ಅಂಗಡಿ

ನಾವಿಕ ಸಮಾಜದ ಬಡ ಜನರಿಗೆ ಕೇಂದ್ರ ಸಚಿವ ಸುರೇಶ ಅಂಗಡಿ ಅವರು ಆಹಾರ ಪದಾರ್ಥಗಳ ಕಿಟ್‍ಗಳನ್ನು ವಿತರಿಸಿದರು.

groceries kit Distribution
ನಾವಿಕ ಸಮುದಾಯದವರಿಗೆ ದಿನಸಿ ಕಿಟ್ ವಿತರಣೆ
author img

By

Published : Jun 20, 2020, 10:43 PM IST

ಬೆಳಗಾವಿ: ಜಿಲ್ಲೆಯ ಹಿಂಡಲಗಾದ ಬಿಜೆಪಿ ಕಚೇರಿ ಸಭಾ ಭವನದಲ್ಲಿ ನಾವಿಕ ಸಮಾಜದ ಬಡ ಜನರಿಗೆ ಕೇಂದ್ರ ಸಚಿವ ಸುರೇಶ ಅಂಗಡಿ ಅವರು ಆಹಾರ ಪದಾರ್ಥಗಳ ಕಿಟ್‍ಗಳನ್ನು ವಿತರಿಸಿದರು.

ನಾವಿಕ ಸಮುದಾಯದವರಿಗೆ ದಿನಸಿ ಕಿಟ್ ವಿತರಣೆ

ಬಳಿಕ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆ ಸಾಕಷ್ಟು ಸಮಸ್ಯೆಗಳು ಉದ್ಭವಿಸಿವೆ. ಹೀಗಾಗಿ ಬಡ ಜನರಿಗೆ ದಿನಸಿ ಕಿಟ್ ಗಳನ್ನು ವಿತರಿಸಲಾಗುತ್ತಿದೆ. ಇದಲ್ಲದೇ ದೇಶದ ಜನತೆಯ ನೋವಿಗೆ ಸ್ಪಂದಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿದ್ದಾರೆ. ಹೀಗಾಗಿ ಎಲ್ಲರೂ ಕೂಡ ಕೊರೊನಾ ವಿರುದ್ಧ ಜಾಗೃತಿ ವಹಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ಭಾರತೀಯರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುವ ಕಾರಣ ದೇಶದಲ್ಲಿ ಕೊರೊನಾ ವೈರಸ್ ಅಷ್ಟೊಂದು ಪ್ರಭಾವ ಬೀರಿಲ್ಲ. ಆದರೂ ಕೂಡ ಸಾಮಾಜಿಕ ಅಂತರ ಕಾಪಾಡಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.