ETV Bharat / state

ಮತ್ತೊಮ್ಮೆ ನಡೆಯುತ್ತಾ ಬಿಜೆಪಿ ಜೆಡಿಎಸ್ ಮೈತ್ರಿ: ಸಚಿವ ಅಂಗಡಿ ಏನ್ ಹೇಳ್ತಾರೆ..?

ಹೆಚ್​​.ಡಿ ಕುಮಾರಸ್ವಾಮಿ ಬಿಜೆಪಿಗೆ ಬಂದರೆ ಸ್ವಾಗತ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಸುರೇಶ್​ ಅಂಗಡಿ
author img

By

Published : Oct 29, 2019, 8:56 AM IST

ಬೆಳಗಾವಿ: ಬಿಜೆಪಿ ಅಧಿಕಾರ ಕಳೆದುಕೊಳ್ಳಲು ನಾನು ಬಿಡುವುದಿಲ್ಲ ಎಂಬ ಹೆಚ್​ಡಿಕೆ ಹೇಳಿಕೆಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಪ್ರತಿಕ್ರಿಯಿಸಿದ್ದು ಕುಮಾರಸ್ವಾಮಿ ಪಕ್ಷಕ್ಕೆ ಬಂದರೆ ಸ್ವಾಗತ ಎಂದಿದ್ದಾರೆ.

20 :20 ಸರ್ಕಾರದಲ್ಲಿ ನಮ್ಮ ಜೊತೆ ಕೆಲಸ ಮಾಡಿರುವ ಕುಮಾರಸ್ವಾಮಿ ಅವರಿಗೆ ಬಿಜೆಪಿ ಮೇಲೆ ನಂಬಿಕೆ ಇದ್ದು ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಮತ್ತೊಮ್ಮೆ ಬಿಜೆಪಿ -ಜೆಡಿಎಸ್​​ ಮೈತ್ರಿ ನಡೆಯುತ್ತಾ ಎಂಬ ಅನುಮಾನ ಮೂಡಿದೆ.ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಪಕ್ಷ ಜೊತೆಗೂಡಿ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಾಗಿತ್ತು.‌ ಹಾಗಾಗಿ ಬಿಜೆಪಿ ಸರ್ಕಾರ ಅಧಿಕಾರವಿದ್ದರೆ ರಾಜ್ಯ ಅಭಿವೃದ್ಧಿ ಆಗುತ್ತದೆ ಜೊತೆಗೆ ಯಡಿಯೂರಪ್ಪ ಸರ್ಕಾರ ಇರಲಿ ಎಂದು ಕುಮಾರಸ್ವಾಮಿ ಪ್ರಾರ್ಥನೆ ಮಾಡಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದ್ರು.

ಕೇಂದ್ರ ಸಚಿವ ಸುರೇಶ್​ ಅಂಗಡಿ

ಸಿದ್ದರಾಮಯ್ಯ ಮೂಲ ಕಾಂಗ್ರೆಸ್ ಪಕ್ಷದವರಲ್ಲ. ಜೆ.ಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದವರು. ಸದ್ಯ ತಮ್ಮ ನೆಲೆಗಾಗಿ ಇಟಾಲಿಯನ್ ಕಾಂಗ್ರೆಸ್​​ನ ಸೆರಗು ಹಿಡಿದಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿದ್ದ ಕಾಂಗ್ರೆಸ್ ಈಗಿನ ಕಾಂಗ್ರೆಸ್ ಅಲ್ಲ. ಇದು ಮತ್ತೊಂದು ಈಸ್ಟ್ ಇಂಡಿಯಾ ಕಂಪನಿಯಾಗಿದೆ ಎಂದರು.

Intro:ಮತ್ತೊಮ್ಮೆ ನಡೆಯುತ್ತಾ ಬಿಜೆಪಿ ಜೆಡಿಎಸ್ ಮೈತ್ರಿ : ಸಚಿವ ಅಂಗಡಿ ಏನ್ ಹೇಳ್ತಾರೆ

ಬೆಳಗಾವಿ : ಬಿಜೆಪಿ ಅಧಿಕಾರ ಕಳೆದುಕೊಳ್ಳಲು ನಾನು ಬಿಡುವುದಿಲ್ಲ ಎಂಬ ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಸುರೇಶ್ ಅಂಗಡಿ. 20 : 20 ಸರ್ಕಾರದಲ್ಲಿ ನಮ್ಮ ಜೊತೆ ಕೆಲಸ ಮಾಡಿರುವ ಕುಮಾರಸ್ವಾಮಿ ಅವರಿಗೆ ಬಿಜೆಪಿ ಮೇಲೆ ನಂಬಿಕೆ ಇದ್ದು ಅವರು ಬಂದರೆ ಪಕ್ಷಕ್ಕೆ ಸ್ವಾಗತ ಎಂಬ ಮಾತು ಹೇಳಿದ್ದು. ಮತ್ತೊಮ್ಮೆ ಬಿಜೆಪಿ ಕಾಂಗ್ರೆಸ್ ಮೈತ್ರಿ ನಡೆಯುತ್ತಾ ಎಂಬ ಅನುಮಾನ ಮೂಡಿದೆ.

ಇಂದು‌ ಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ. ಹಿಂದೊಮ್ಮೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಪಕ್ಷ ಜೊತೆಗೂಡಿ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಾಗಿತ್ತು.‌ ಹಾಗಾಗಿ ಬಿಜೆಪಿ ಸರ್ಕಾರ ಅಧಿಕಾರವಿದ್ದರೆ ರಾಜ್ಯ ಅಭಿವೃದ್ಧಿ ಆಗುತ್ತದೆ ಜೊತೆಗೆ ಯಡಿಯೂರಪ್ಪ ಸರ್ಕಾರ ಇರಲಿ ಎಂದು ಕುಮಾರಸ್ವಾಮಿ ಪ್ರಾರ್ಥನೆ ಮಾಡಿದ್ದಾರೆ ಎಂದರು.

ಬಿಜೆಪಿ ದೇಶದ ದೊಡ್ಡ ರೈಲು ಇದ್ದಹಾಗೆ. ಒಂದುವೇಳೆ ಜೆಡಿಎಸ್ ಪಕ್ಷ ನಮ್ಮ ಜೊತೆ ಬಂದರು ಅವರನ್ನು ಕರೆದುಕೊಂಡು ಹೋಗುತ್ತೇವೆ ಎಂಬ ಮಾತನಾಡಿದ್ದು ಮತ್ತೊಮ್ಮೆ ಬಿಜೆಪಿ ಜೆಡಿಎಸ್ ಮೈತ್ರಿಗೆ ಕಾಲ ಕೂಡಿಬರುತ್ತದಾ ಎಂದು ಕಾದು ನೋಡಬೇಕು.

Body:ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್ ಪಕ್ಷದವರು ಅಲ್ಲ. ಜೆ.ಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ದ ಹೋರಾಟ ಮಾಡಿದವರು. ಸಧ್ಯ ತಮ್ಮ ನೆಲೆಗಾಗಿ ಇಟಾಲಿಯನ್ ಕಾಂಗ್ರೆಸ್ ನ ಸೆರಗು ಹಿಡಿದಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿದ್ದ ಕಾಂಗ್ರೆಸ್ ಈಗಿನ ಕಾಂಗ್ರೆಸ್ ಅಲ್ಲ. ಇದು ಮತ್ತೊಂದು ಈಸ್ಟ್ ಇಂಡಿಯಾ ಕಂಪನಿಯಾಗಿದೆ ಎಂದರು.

Conclusion:ಇನ್ನೂ ರೈಲ್ವೆ ಸುರಕ್ಷತೆ ಬಗ್ಗೆ ಮಾತನಾಡಿದ ಸಚಿವರು. ಪ್ರಯಾಣಿಕರು ರೈಲ್ವೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಯಾವುದಾದರೂ ಸಂಶಯಾಸ್ಪದ ವಸ್ತು ಕಂಡುಬಂದರೆ ಸಂಭಂದಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ರೈಲ್ವೆ ಸುರಕ್ಷತೆಯಲ್ಲಿ ಸಾರ್ವಜನಿಕರ ಪಾತ್ರ ತುಂಬಾ ಮುಖ್ಯ. ಜೊತೆಗೆ ದೇಶದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.