ಬೆಳಗಾವಿ: ಅರಣ್ಯ ಇಲಾಖೆ ಸಿಬ್ಬಂದಿ ವಸತಿ ಗೃಹ ನಿರ್ಮಾಣದ ಶಂಕುಸ್ಥಾಪನೆ ವೇಳೆ ಸಚಿವ ಉಮೇಶ್ ಕತ್ತಿಯವರು ಚಪ್ಪಲಿ ಧರಿಸಿ ಗುದ್ದಲಿ ಪೂಜೆ ನೆರವೇರಿಸಿದ ಘಟನೆ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ.
ಗೋಕಾಕದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಚಿವ ಉಮೇಶ್ ಕತ್ತಿ ಭಾಗಿಯಾಗಿದ್ದರು. ಈ ವೇಳೆ ಗಂಟೆಗಟ್ಟಲೇ ಪೂಜೆ ನೆರವೇರಿಸಿದ ಅರ್ಚಕರ ಮೇಲೆ ಸಚಿವರು ಸಿಡಿಮಿಡಿಗೊಂಡಿದ್ದಾರೆ ಎನ್ನಲಾಗುತ್ತಿದೆ.
ಚಪ್ಪಲಿ ಧರಿಸಿ ಗುದ್ದಲಿ ಪೂಜೆ ನೆರವೇರಿಸಿದ ಸಚಿವರ ವಿಡಿಯೋ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಉಮೇಶ್ ಕತ್ತಿ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರೊಂದರಲ್ಲೇ 287 ಮಂದಿಗೆ ಒಮಿಕ್ರಾನ್ ದೃಢ: 766ಕ್ಕೆ ಏರಿದ ಸೋಂಕಿತರ ಸಂಖ್ಯೆ!