ಬೆಳಗಾವಿ: ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯುವ ಮಧ್ಯದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳು ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಾಸಕ ಕೆ ಎ ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಒಂದು ಸುತ್ತಿನ ಸಭೆ ನಡೆಸಿ ವಾಯುವ್ಯ ಮಾರ್ಗವಾಗಿ ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ್ದಾರೆ.
ರಾಸಲೀಲೆ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟದಿಂದ ಕೈಬಿಡಲಾಗಿತ್ತು. ಜೊತೆಗೆ ಬೆಳಗಾವಿ ಗ್ರಾಮ ಪಂಚಾಯಿತಿ ಗುತ್ತೇದಾರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಎಸ್ ಈಶ್ವರಪ್ಪನವರು ತಮ್ಮ ಸಚಿವ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇಬ್ಬರು ಹಿರಿಯ ಶಾಸಕರು ಪ್ರಕರಣದಲ್ಲಿ ಆರೋಪ ಮುಕ್ತರಾಗಿದ್ದಾರೆ. ಈ ಹಿನ್ನೆಲೆ ಸಚಿವ ಸಂಪುಟ ಸ್ಥಾನ ಪಡೆಯಲು ಸಿ ಪಿ ಯೋಗೇಶ್ವರ್ ಜೊತೆಗೆ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಕೆ ಎಸ್ ಈಶ್ವರಪ್ಪ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಇನ್ನು ಸಚಿವ ಸ್ಥಾನ ಸಿಗದ ಹಿನ್ನೆಲೆ ಸಿಎಂ ಹಾಗೂ ಹೈಕಮಾಂಡ್ ಮೇಲೆ ಈಶ್ವರಪ್ಪ ಈಗಾಗಲೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಚಿವ ಸ್ಥಾನ ಸಿಗುವವರೆಗೆ ಅಧಿವೇಶನಕ್ಕೆ ಹಾಜರಾಗಲ್ಲ ಎಂದು ಕೂಡ ಈಶ್ವರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: ರೈತರ ಸಮಸ್ಯೆ ಬಗ್ಗೆ ಮುಖಂಡರ ಜೊತೆ ಸಿಎಂ ಚರ್ಚೆ : ಸಚಿವ ಆರಗ ಜ್ಞಾನೇಂದ್ರ
ಇದನ್ನೂ ಓದಿ: ಸಿಗದ ಸಚಿವ ಸ್ಥಾನ: ಸಿಎಂ, ಹೈಕಮಾಂಡ್ ಮೇಲಿನ ಅಸಮಾಧಾನ ಹೊರಹಾಕಿದ ಈಶ್ವರಪ್ಪ )