ETV Bharat / state

ಬೆಳಗಾವಿ ಜಿಲ್ಲೆಯ ಯಾವ್ಯಾವ ಶಾಸಕರಿಗೆ ಒಲಿಯುತ್ತೆ ಮಂತ್ರಿ ಸ್ಥಾನ ? ಇಲ್ಲಿನ ಸಚಿವ ಸ್ಥಾನದ ಆಕಾಂಕ್ಷಿಗಳ ವಿವರ - ಈಟಿವಿ ಭಾರತ ಕರ್ನಾಟಕ

ಬೆಳಗಾವಿಯ ಜಿಲ್ಲೆಯಿಂದ 11 ಮಂದಿ ಕಾಂಗ್ರೆಸ್​ ಶಾಸಕರು ಆಯ್ಕೆಯಾಗಿದ್ದು, ಸಚಿವ ಸ್ಥಾನ ಪಡೆಯಲು ಆಕಾಂಕ್ಷಿಗಳು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.

ministerial-aspirants-from-belgavi-district
ಬೆಳಗಾವಿ ಜಿಲ್ಲೆಯ ಯಾವ್ಯಾವ ಶಾಸಕರಿಗೆ ಒಲಿಯುತ್ತೆ ಮಂತ್ರಿ ಸ್ಥಾನ ? ಸಚಿವ ಸ್ಥಾನದ ಆಕಾಂಕ್ಷಿಗಳ ವಿವರ ಇಲ್ಲಿದೆ..
author img

By

Published : May 15, 2023, 6:01 PM IST

ಬೆಳಗಾವಿ: ಕಾಂಗ್ರೆಸ್​ನಲ್ಲಿ ಒಂದೆಡೆ ಮುಖ್ಯಮಂತ್ರಿ‌ ಯಾರಾಗ್ತಾರೆ ಎಂಬ ಚರ್ಚೆ ಜೋರಾಗಿದ್ದರೆ. ಮತ್ತೊಂದೆಡೆ ಅತೀ ಹೆಚ್ಚು ಶಾಸಕರನ್ನು ಗೆಲ್ಲಿಸಿ ಕೊಟ್ಟಿರುವ ಬೆಳಗಾವಿ ಜಿಲ್ಲೆಗೆ ಈ ಬಾರಿ ಹೆಚ್ಚು ಸಚಿವ ಸ್ಥಾನ‌ ಸಿಗುವ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿವೆ. ಕಳೆದ ಬಾರಿಯ ಬಿಜೆಪಿ ಸರ್ಕಾರದಲ್ಲಿ ಲಕ್ಷ್ಮಣ ಸವದಿ, ದಿ. ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ರಮೇಶ್​ ಜಾರಕಿಹೊಳಿ, ಶ್ರೀಮಂತ ಪಾಟೀಲ ಮಂತ್ರಿಯಾಗಿದ್ದರು. ಯಡಿಯೂರಪ್ಪ ಸರ್ಕಾರದಲ್ಲಿ ಡಿಸಿಎಂ ಆಗಿದ್ದ ಸವದಿ, ಬೊಮ್ಮಾಯಿ ಸರ್ಕಾರದಲ್ಲಿ ಡಿಸಿಎಂ ಸ್ಥಾನದ ಜೊತೆಗೆ ಮಂತ್ರಿ ಸ್ಥಾನವನ್ನು ಕಳೆದುಕೊಳ್ಳಬೇಕಾಯಿತು.

ಇನ್ನು, ಸಿಡಿ ಪ್ರಕರಣದಲ್ಲಿ ರಮೇಶ್​ ಜಾರಕಿಹೊಳಿ ಕೂಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಎಸ್​ವೈ ಸಂಪುಟದಲ್ಲಿದ್ದ ಶ್ರೀಮಂತ ಪಾಟೀಲಗೆ ಬೊಮ್ಮಾಯಿ ಸರ್ಕಾರದಲ್ಲಿ ಕೋಕ್ ನೀಡಲಾಗಿತ್ತು. ಅದೇ ರೀತಿ ಉಮೇಶ್​ ಕತ್ತಿಯವರ ಅಕಾಲಿಕ‌ ನಿಧನದಿಂದ ಜಿಲ್ಲೆಗೆ ಮತ್ತೊಂದು ಸ್ಥಾನ ಕಡಿಮೆಯಾಗಿತ್ತು. ಶಶಿಕಲಾ ಜೊಲ್ಲೆ ಮಾತ್ರ ಪೂರ್ಣ ಅವಧಿಗೆ ಸಚಿವೆಯಾಗಿದ್ದರು. ಈಗ ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ 135 ಸೀಟ್ ಗೆಲ್ಲುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲು ಸನ್ನದ್ಧವಾಗಿದೆ. ಇದರಲ್ಲಿ ಬೆಳಗಾವಿ ಕೊಡುಗೆ ಕೂಡ ಅಪಾರವಾಗಿದ್ದು, 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಗೆದ್ದಿದ್ದರೆ, ಬಿಜೆಪಿ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಳೆದ ಬಾರಿ 13 ಬಿಜೆಪಿ, ಐವರು ಕಾಂಗ್ರೆಸ್ ಶಾಸಕರು ಗೆದ್ದು ಬಂದಿದ್ದರು.

ನಾಲ್ಕೈದು ಬಾರಿ ಆಯ್ಕೆಯಾದವರು, ಹ್ಯಾಟ್ರಿಕ್‌ ಗೆಲುವು ಕಂಡವರು ತಮಗೂ ಮಂತ್ರಿ ಸ್ಥಾ‌ನ ಸಿಗುತ್ತೆ ಎನ್ನುವ ಲೆಕ್ಕಾಚಾರದಲ್ಲಿದ್ದಾರೆ. ಅಲ್ಲದೇ ಈಗಿನಿಂದಲೇ ಮಂತ್ರಿ‌ ಪದವಿಗಾಗಿ ಲಾಬಿ‌ ಶುರುವಾಗಿದೆ. ಅದರಲ್ಲೂ ಪ್ರಕಾಶ್​ ಹುಕ್ಕೇರಿ ಸತತ ಐದು ಬಾರಿ ಶಾಸಕರಾಗಿ, ಸಂಸದರಾಗಿ, ಎರಡನೇ ಬಾರಿಗೆ ವಿಧಾನ ಪರಿಷತ್‌ ಸದಸ್ಯರಾಗಿದ್ದು, ತಮ್ಮ ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ಕೇಳುವ ಸಾಧ್ಯತೆಯಿದೆ. ಈ ಹಿಂದೆ ಕೂಡ ಎರಡು ಬಾರಿ ಸಚಿವರಾಗಿರುವ ಪ್ರಕಾಶ್​ ಹುಕ್ಕೇರಿ ತಮ್ಮ ಪುತ್ರ ಗಣೇಶ ಹುಕ್ಕೇರಿಯನ್ನು ಮೂರು ಬಾರಿ‌ ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಗೆಲ್ಲಿಸಿದ್ದು, ಈ ಬಾರಿ 78,509 ಮತಗಳ ಭಾರಿ ಅಂತರದಿಂದ ರಮೇಶ್​ ಕತ್ತಿ ವಿರುದ್ಧ ಗಣೇಶ ಹುಕ್ಕೇರಿ ಗೆದ್ದು ಬೀಗಿದ್ದಾರೆ. ಹೀಗಾಗಿ ಪ್ರಕಾಶ್​ ಹುಕ್ಕೇರಿ ತಮಗೆ ಅಥವಾ ತಮ್ಮ ಪುತ್ರನಿಗೆ ಮಂತ್ರಿ ಸ್ಥಾನ ನೀಡುವಂತೆ ಪಟ್ಟು ಹಿಡಿಯಲಿದ್ದಾರೆ.

ಬೆಳಗಾವಿ ಜಿಲ್ಲೆ ಕಾಂಗ್ರೆಸ್ ಮಾಸ್ಟರ್ ಮೈಂಡ್ ಸತೀಶ್​ ಜಾರಕಿಹೊಳಿ ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ 11 ಸ್ಥಾನ ಗೆಲ್ಲಿಸುವಲ್ಲಿ ಶ್ರಮಿಸಿದ್ದರು. ರಾಜ್ಯ ನಾಯಕರು ಪ್ರಚಾರಕ್ಕೆ ಅಷ್ಟಾಗಿ ಆಗಮಿಸದಿದ್ದರೂ‌ ಪ್ರತಿ ಕ್ಷೇತ್ರದ ಜವಾಬ್ದಾರಿ ತೆಗೆದುಕೊಂಡು ಅಹಿಂದ ಮತಗಳನ್ನು ಕ್ರೋಢಿಕರಿಸಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಈ ಬಾರಿ ಸತೀಶ್​ ಜಾರಕಿಹೊಳಿಗೆ ಮಂತ್ರಿ‌ ಸ್ಥಾನ ಸಿಗುವುದು ಪಕ್ಕಾ ಎನ್ನಲಾಗುತ್ತಿದೆ.

ಇನ್ನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆ‌ ಆಗುವುದರ ಜೊತೆಗೆ ತಾವು ಗೆದ್ದು ಕಾಗವಾಡ, ಕುಡಚಿಯಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿರುವ ಲಕ್ಷ್ಮಣ್​ ಸವದಿಗೂ ಮಂತ್ರಿ ಸ್ಥಾನ ಸಿಗುತ್ತೆ ಎನ್ನಲಾಗುತ್ತಿದೆ. ಅಥಣಿಯಲ್ಲಿ ಈ ಬಾರಿ ಹೇಗಾದ್ರೂ ಮಾಡಿ ಲಕ್ಷ್ಮಣ್​ ಸವದಿಯನ್ನು ಸೋಲಿಸಲೇಬೇಕು ಎಂದು ರಮೇಶ ಜಾರಕಿಹೊಳಿ ಪಣ ತೊಟ್ಟಿದ್ದರು.‌‌ ಇದಕ್ಕೆ ಸೆಡ್ಡು ಹೊಡೆದ ಸವದಿ 76,122 ಮತಗಳ ಭಾರಿ ಅಂತರದಿಂದ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಹೀಗಾಗಿ ಲಕ್ಷ್ಮಣ ಸವದಿಗೂ ಮಂತ್ರಿ ಸ್ಥಾ‌ನ ಒಲಿಯುವ ಸಾಧ್ಯತೆಯಿದೆ.

ಇಡೀ ರಾಜ್ಯದ ಗಮನ ಸೆಳೆದಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ತೀವ್ರ ವಿರೋಧ ನಡುವೆಯೂ 56,016 ಮತಗಳ ಅಂತರದಿಂದ ಗೆದ್ದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಈ ಬಾರಿ ಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ. ಮಹಿಳಾ ಕೋಟಾ ಮತ್ತು ಲಿಂಗಾಯತ ಕೋಟಾ ಎರಡರಲ್ಲೂ ಸಚಿವ ಸ್ಥಾನಕ್ಕೆ ಹೆಬ್ಬಾಳ್ಕರ್ ಬೇಡಿಕೆ ಇಡಲಿದ್ದಾರೆ. ಅಲ್ಲದೇ ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಹೆಚ್ಚಿನ ಶ್ರಮ ವಹಿಸಿದ್ದರು.

ಅಲ್ಲದೇ ಇಡೀ ರಾಜ್ಯದಲ್ಲಿ ಪ್ರಭಾವಿ ನಾಯಕಿಯಾಗಿ ಹೊರ ಹೊಮ್ಮಿದ್ದಾರೆ. ಹೀಗಾಗಿ ಸಹಜವಾಗಿ‌‌ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ. ನಾಲ್ಕು ಬಾರಿ‌ ಗೆದ್ದಿರುವ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಹ್ಯಾಟ್ರಿಕ್ ಗೆಲುವು ಕಂಡಿರುವ ರಾಮದುರ್ಗ ಶಾಸಕ ಅಶೋಕ್​ ಪಟ್ಟಣ ಕೂಡ ಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಮಹಾಂತೇಶ ಕೌಜಲಗಿ ತಂದೆ ಶಿವಾನಂದ ಕೌಜಲಗಿ ಕೂಡ ಸಚಿವರಾಗಿ ಕೆಲಸ ಮಾಡಿದವರು. ಇನ್ನು ಅಶೋಕ ಪಟ್ಟಣ ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದು, ಈ ಇಬ್ಬರೂ ಶಾಸಕರು ಕೂಡ ಮಂತ್ರಿ ಸ್ಥಾನದ ರೇಸ್ ನಲ್ಲಿದ್ದಾರೆ.

ಇದನ್ನೂ ಓದಿ:ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು: ಯಾರಿಗೆ ಸಿಗಲಿದೆ ಸಚಿವ ಸ್ಥಾನದ ಪಟ್ಟ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.