ಚಿಕ್ಕೋಡಿ: ಯಡಿಯೂರಪ್ಪ ನೇತೃತ್ವದಲ್ಲಿ ಮತೊಮ್ಮೆ ಜನ ವಿಶ್ವಾಸ ವ್ಯಕ್ತ ಪಡಿಸಿದ್ದು, ಬೆಳಗಾವಿ ಜಿಲ್ಲೆಯ 3 ಕ್ಷೇತ್ರದಲ್ಲಿ ಬಿಜೆಪಿ ಗೆಲವು ಸಾಧಿಸಿದೆ ಎಂದು ಜಿಲ್ಲೆಯ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದರು.
ಬೆಳಗಾವಿ ಜಿಲ್ಲೆಯ ಆರ್ಪಿಡಿ ಕಾಲೇಜಿನಲ್ಲಿ ಉಪಚುನಾವಣೆ ಫಲಿತಾಂಶದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಈ ಚುನಾವಣೆ ಉತ್ತರ ಕರ್ನಾಟಕ ಮಾತ್ರವಲ್ಲ, ರಾಜ್ಯದ 15 ಕಡೆ ನಡೆದಿದ್ದು, ಅದರಲ್ಲಿ ಬಿಜೆಪಿ ಗೆಲವು ಸಾಧಿಸಿದೆ. ಮುಂಬರುವ ದಿನಗಳಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಕರ್ನಾಟಕ ಅಭಿವೃದ್ಧಿ ಹೊಂದಲಿ ಎನ್ನುವ ಜನಾದೇಶ ಮತ್ತೊಮ್ಮೆ ಜನರು ಕೊಟ್ಟಿದ್ದಾರೆ ಎಂದರು.