ಬೆಳಗಾವಿ : ಶಾಸಕ ಅಭಯ ಪಾಟೀಲ ಸೈಕಲ್ ಏರಿ ಕ್ಷೇತ್ರದಲ್ಲಿ ಸುತ್ತಾಡಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ ಅವರು ಇಂದು ತಮ್ಮ ಕ್ಷೇತ್ರದ ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಮಾಡಿದರು.
ವಿನೂತನವಾಗಿ ಸೈಕಲ್ ಸವಾರಿ ನಡೆಸಿದ ಶಾಸಕರು, ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸಾರ್ವಜನಿಕರ ದೂರುಗಳನ್ನು ಆಲಿಸಿ, ಪರಿಹರಿಸುವುದಾಗಿ ಭರವಸೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಅಭಯ್ ಪಾಟೀಲ, ದಕ್ಷಿಣ ಮತಕ್ಷೇತ್ರದಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ.
ಕಸ ಸಂಗ್ರಹದ ನಿರ್ವಹಣೆಯಲ್ಲಿ ಲೋಪಗಳಿದ್ದು, ವಾರದಲ್ಲಿ ಅದನ್ನು ಸರಿಪಡಿಸಿಕೊಳ್ಳದಿದ್ರೆ, ಕಸವನ್ನು ಅಧಿಕಾರಿಗಳ ಕಾರಿನಲ್ಲಿ ಸುರಿಯುವ ಜನಾಂದೋಲನ ಶುರು ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.