ಬೆಳಗಾವಿ : ಬುಡಾ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ವೀಕ್ಷಣೆ ಮಾಡಿದರು.
ನಗರದ ಆಟೋ ನಗರ, ಮಾಳ ಮಾರುತಿ ಎಕ್ಸ್‌ಟೆನ್ಸನ್ ಹಾಗೂ ರಾಮತೀರ್ಥ ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಶಾಸಕರು. ಆದಷ್ಟು ಬೇಗ ಕಾಮಗಾರಿಗಳನ್ನು ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಳಗಾವಿ ನಗರದಲ್ಲಿ, ರಸ್ತೆ ಹಾಗೂ ಚರಂಡಿ, ಸೈಕಲ್ ಟ್ರ್ಯಾಕ್, ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳು ಪ್ರಗತಿಯಲ್ಲಿದೆ.