ಬೆಳಗಾವಿ: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಇಂದು ಗಣಿತ ಪರೀಕ್ಷೆ ಬರೆಯುತ್ತಿದ್ದು, ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಇಲ್ಲಿನ ಸರ್ದಾರ್ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರು.
ಪೆನ್ ಹಾಗೂ ಮಾಸ್ಕ್ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆಯೂ ಶಾಸಕ ಬೆನಕೆ ಪರಿಶೀಲನೆ ನಡೆಸಿದರು.
ಅಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಇವತ್ತು ಎಬಿವಿಪಿ ಕಾರ್ಯಕರ್ತರು ಆಗಮಿಸಿ ವಿದ್ಯಾರ್ಥಿಗಳ ಸ್ಕ್ರೀನಿಂಗ್ ಮಾಡಿ, ಸ್ಯಾನಿಟೈಸರ್ ನೀಡಿದರು. ವೈದ್ಯಕೀಯ ಸಿಬ್ಬಂದಿ ಜತೆಗೆ ಎಬಿವಿಪಿ ಕಾರ್ಯಕರ್ತರು ಕೈಜೋಡಿಸಿದರು.
ಸರ್ದಾರ್ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು.