ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ 35 ಅಡಿ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಉರುಳಿದ್ದು, ಆರು ಜನರು ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲೂಕಿನ ಇಟಗಿ ಗ್ರಾಮದ ಬಳಿ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್, ಮಾಜಿ ಶಾಸಕ ಅರವಿಂದ ಪಾಟೀಲ ಭೇಟಿ ನೀಡಿದರು. ಖಾನಾಪುರ ತಾಲೂಕಿನ ಇಟಗಿ-ಬೋಗೂರ ಗ್ರಾಮದ ಮಧ್ಯದ ಸೇತುವೆ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದೇ ಅಪಘಾತಕ್ಕೆ ಕಾರಣ ಎಂದು ಶಾಸಕಿ ಎದುರು ಗ್ರಾಮಸ್ಥರು ಅಳಲು ತೋಡಿಕೊಂಡರು.
ಬೆಳಗಾವಿಯಲ್ಲಿ ಸೇತುವೆ ಮೇಲಿಂದ ಉರುಳಿದ ಟ್ರ್ಯಾಕ್ಟರ್: ಆರು ಜನರ ದುರ್ಮರಣ
ಕಳೆದ ಎರಡು ವರ್ಷಗಳಿಂದ ಸೇತುವೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಮನವಿ ಮಾಡಿದ್ದರು. ಆದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.