ಗೋಕಾಕ್: ಅನರ್ಹರು ಮತ್ತೆ ಅನರ್ಹರಾಗ್ತಾರೆ ಎಂದು ಶಾಸಕ ಬಂಡೆಪ್ಪ ಕಾಶಂಪೂರ್ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹರಿಂದಲೇ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂದು ಯಡಿಯೂರಪ್ಪನವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆ ಸಂಗ್ರಹಿಸುತ್ತೇವೆ. ಈ ವಿಷಯವಾಗಿ ಮತ್ತೆ ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸುತ್ತೇವೆ ಎಂದರು.
ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಿ ರಾಜ್ಯ ಚುನಾವಣೆ ಆಯೋಗಕ್ಕೆ ಈ ಬಗ್ಗೆ ದೂರು ಸಲ್ಲಿಸುತ್ತೇನೆ ಎಂದರು.