ETV Bharat / state

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಮಹಿಳಾ ದಿನ ಆಚರಿಸಿದ ಲಕ್ಷ್ಮಿ ಹೆಬ್ಬಾಳ್ಕರ್​

ಕ್ಷೇತ್ರದ ಜನರ ಆಶಿರ್ವಾದ, ಪ್ರೀತಿ ಇದ್ದರೆ ಮುಂದಿನ ದಿನಗಳಲ್ಲಿ ಹಲವಾರು ಬೃಹತ್ ಯೋಜನೆಗಳನ್ನು ತರುವ ಕನಸು ಹೊತ್ತಿದ್ದೇನೆ. ಪ್ರವಾಸೋದ್ಯಮ, ನೀರಾವರಿ ಸೌಲಭ್ಯ ಹಾಗೂ ಜಾತಿ, ಭಾಷೆ, ರಾಜಕೀಯವನ್ನು ಬದಿಗಿಟ್ಟು ಜನರ ಸೇವೆ ಮಾಡಲು ಬದ್ಧಳಾಗಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

MLA  Lakshmi Hebbalkar
ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್​
author img

By

Published : Mar 9, 2020, 5:07 AM IST

Updated : Mar 9, 2020, 7:51 AM IST

ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮೊದಲ ಮಹಿಳಾ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಮಹಿಳಾ ದಿನಾಚರಣೆ ವಿಶಿಷ್ಠವಾಗಿ ಅಚರಿಸಿದರು.

ಈ ಸಂದರ್ಭದಲ್ಲಿ ಅವರು ವಿವಿಧೆಡೆ ಚರಂಡಿ ನಿರ್ಮಾಣ, ರಸ್ತೆ ಡಾಂಬರೀಕರಣ ಹಾಗೂ ತುರಮರಿ ಹಾಗೂ ಕಲ್ಲೇಹೊಳ ಭಾಗದ ರೈತರಿಗೆ ಅನುಕೂಲವಾಗುವಂತೆ ಸಣ್ಣ ನೀರಾವರಿ ಇಲಾಖೆಯ ಅನುದಾನದಲ್ಲಿ ಒಟ್ಟು 65 ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಿಡ್ಜ್ ಕಂ ಬಾಂದಾರ್ ಸುಧಾರಣೆಯ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಉಚಗಾಂವ ಗ್ರಾಮದಲ್ಲಿ ಕಳೆದ ವರ್ಷ ವಿಪರೀತ ಮಳೆಯಿಂದಾಗಿ ರಸ್ತೆಗಳ ದುರಸ್ತಿಗೆ ಪಂಚಾಯತ್ ರಾಜ್ ಎಂಜಿನಿಯರಿಂಗ್‌ ಇಲಾಖೆಯಿಂದ 1 ಕೋಟಿ ರೂ.ಗಳ ವೆಚ್ಚದ ಕಾಂಕ್ರೀಟ್ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು.

MLA  Lakshmi Hebbalkar
ರಸ್ತೆ ಕಾಮಗಾರಿಗೆ ಚಾಲನೆ

ಬಳಿಕ ಮಾತನಾಡಿದ ಶಾಸಕಿ‌ ಲಕ್ಷ್ಮಿ ಹೆಬ್ಬಾಳ್ಕರ್, ನನ್ನ ಗ್ರಾಮೀಣ ಕ್ಷೇತ್ರ ಅತ್ಯಂತ ವಿಶಿಷ್ಟವಾಗಿದೆ‌. ಇಲ್ಲಿಯ ಜನರು ಬಹಳ ಮೃದು ಸ್ವಭಾವದವರು. ಆದರೆ, ಇಲ್ಲಿಯವರೆಗೆ ಆ ಜನರ ಮುಗ್ದತೆಯನ್ನು ಬಳಸಿಕೊಂಡು ಕೇವಲ ಓಟ್ ಬ್ಯಾಂಕ್ ಆಗಿ ಬಳಸಿಕೊಂಡು ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡದೇ ಕ್ಷೇತ್ರದ ಜನತೆಗೆ ಅನ್ಯಾಯ ಮಾಡಿದ್ದಾರೆ ಎಂದರು.

ನಾನು ಶಾಸಕಿಯಾದ ನಂತರ ಕ್ಷೇತ್ರವನ್ನು ಮಾದರಿಯಾಗಿಸುವ ಗುರಿ ಇಟ್ಟುಕೊಂಡು ನಿರಂತರವಾಗಿ ಅಭಿವೃದ್ಧಿ ಯೋಜನೆಗಳನ್ನು ತರುತ್ತಿದ್ದೇನೆ. ಕ್ಷೇತ್ರದ ಜನರ ಆಶೀರ್ವಾದ, ಪ್ರೀತಿ ಇದ್ದರೆ ಮುಂದಿನ ದಿನಗಳಲ್ಲಿ ಹಲವಾರು ಬೃಹತ್ ಯೋಜನೆಗಳನ್ನು ತರುವ ಕನಸು ಹೊತ್ತಿದ್ದೇನೆ. ಇದರಿಂದ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಇಲ್ಲಿನ ಯುವಕರಿಗೆ ಉದ್ಯೋಗ ದೊರೆಯಲಿದೆ. ಪ್ರವಾಸೋದ್ಯಮ ದೃಷ್ಟಿಯಿಂದಲೂ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು. ಸಂಪೂರ್ಣ ನೀರಾವರಿಗೆ ಒಳಪಡಿಸಲಾಗುವುದು. ಜಾತಿ, ಭಾಷೆ, ರಾಜಕೀಯವನ್ನು ಬದಿಗಿಟ್ಟು ಜನರ ಸೇವೆ ಮಾಡಲು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು.

ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Last Updated : Mar 9, 2020, 7:51 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.