ETV Bharat / state

ರಮೇಶ್ ಜಾರಕಿಹೊಳಿ ಹೇಳಿಕೆಗೆ ಮತ್ತೆ ಟಾಂಗ್​ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್​ - ರಮೇಶ್ ಜಾರಕಿಹೊಳಿ ಹೇಳಿಕೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ

ಕರ್ನಾಟಕವನ್ನ ಕನ್ನಡಾಂಬೆ ಎಂದು ಕರೆಯುತ್ತೇವೆ. ಹೆಣ್ಣು ಮಕ್ಕಳಿಗೆ ಯಾವ ರೀತಿ ಥೂ ಥೂ...ಎನ್ನುತ್ತಿದ್ದಾರೆ ಎಂದು ತಾವೇ ನೋಡುತ್ತಿದ್ದೀರಿ ಎನ್ನುವ ಮೂಲಕ ರಮೇಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಠಕ್ಕರ್​ ಕೊಟ್ಟಿದ್ದಾರೆ.

mla lakshmi hebbalkar reaction to ramesh jarkiholi statement
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ​
author img

By

Published : Nov 25, 2021, 5:12 PM IST

ಚಿಕ್ಕೋಡಿ: ಕರ್ನಾಟಕವನ್ನು ಕನ್ನಡಾಂಬೆ ಎಂದು ಕರೆಯುತ್ತೇವೆ. ಆದ್ರೆ, ಎರಡು ದಿನಗಳ ಹಿಂದೆ ಹೆಣ್ಣು ಮಕ್ಕಳಿಗೆ ಯಾವ ರೀತಿ ಥೂ ಥೂ..ಎನ್ನುತ್ತಿದ್ದಾರೆ ಎಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ರಾಯಬಾಗ ಮಹಾವೀರ ಭವನದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಪ್ರಚಾರ ಸಭೆಯ ವೇದಿಕೆ ಭಾಷಣದಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ರಮೇಶ್​ ಜಾರಕಿಹೊಳಿ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಪ್ರಸ್ತಾಪಿಸುತ್ತಿದ್ದಂತೆ ಥೂ ಥೂ.....ಎಂದಿದ್ದಕ್ಕೆ ಸಿಡಿಮಿಡಿಗೊಂಡಿದ್ದರು.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ​

ಇದನ್ನೂ ಓದಿ:ಹೆಬ್ಬಾಳ್ಕರ್-ಜಾರಕಿಹೊಳಿ ಕುಟುಂಬಕ್ಕೆ ಪ್ರತಿಷ್ಠೆಯಾದ ಪರಿಷತ್ ಚುನಾವಣೆ

ಭಾಷಣದಲ್ಲಿ ರಮೇಶ್ ಜಾರಕಿಹೊಳಿ‌ ಹೆಸರನ್ನು ಪ್ರಸ್ತಾಪ ಮಾಡದೇ ಹೆಬ್ಬಾಳ್ಕರ್​ ಟಾಂಗ್ ಕೊಟ್ಟಿದ್ದಾರೆ. ಭಾರತ ದೇಶದಲ್ಲಿ ಹಣ್ಣುಮಕ್ಕಳಿಗೆ ಮರ್ಯಾದೆ ಕೊಡಬೇಕು. ಭಾರತ ದೇಶದ ಹೆಸರು ಕೂಡ ಒಬ್ಬ ಹೆಣ್ಣುಮಗಳ ಹೆಸರಾಗಿದೆ. ಕರ್ನಾಟಕವನ್ನು ಕನ್ನಡಾಂಬೆ ಎಂದು ಕರೆಯುತ್ತೇವೆ. ಆದ್ರೆ, ತಾವೇ ನೋಡಿದ್ದೀರಿ ಹೆಣ್ಣು ಮಕ್ಕಳಿಗೆ ಯಾವ ರೀತಿ ಥೂ ಥೂ...ಎನ್ನುತ್ತಿದ್ದಾರೆ ಅನ್ನೋದನ್ನು. ಪರಿಷತ್ ಚುನಾವಣೆಯಲ್ಲಿ ಯಾವುದೇ ರೀತಿಯ ಆಸೆ ಆಮಿಷಗಳಿಗೆ ಬಲಿಯಾಗದೆ ನನ್ನ ಸಹೋದರನಿಗೆ ಒಂದು ಅವಕಾಶ ಕೊಡಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.