ETV Bharat / state

ನಾವು ಯಾರೂ ಬಿಜೆಪಿ ಪಕ್ಷ ಬಿಟ್ಟು ಹೋಗುವುದಿಲ್ಲ: ಶಾಸಕ ಮಹೇಶ್ ಕುಮಟಳ್ಳಿ - ಅಥಣಿಯಲ್ಲಿ ಶಾಸಕ ಮಹೇಶ ಕುಮಟಳ್ಳಿ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ, ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಾವು ಸಾರ್ವತ್ರಿಕ ಚುನಾವಣೆ ಎದರಿಸುತ್ತೇವೆ. ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ..

ಶಾಸಕ ಮಹೇಶ ಕುಮಟಳ್ಳಿ ಹೇಳಿಕೆ
ಶಾಸಕ ಮಹೇಶ ಕುಮಟಳ್ಳಿ ಹೇಳಿಕೆ
author img

By

Published : Jan 26, 2022, 5:01 PM IST

ಅಥಣಿ : ನನ್ನ ಪ್ರಕಾರ ಯಾರು ಬಿಜೆಪಿ ಪಕ್ಷ ಬಿಟ್ಟು ಹೋಗುವುದಿಲ್ಲ, ನಾನು ಬಿಜೆಪಿ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಮಹೇಶ್ ಕುಮಟಳ್ಳಿ ಸ್ಪಷ್ಟಪಡಿಸಿದ್ದಾರೆ.

ಇಲ್ಲ ನಾ ಬಿಜೆಪಿ ಬಿಟ್ಟು ಎಲ್ಲೂ ಹೋಗಲ್ಲ ಅಂತಾ ಹೇಳಿರುವ ಶಾಸಕ ಮಹೇಶ ಕುಮಟಳ್ಳಿ..

ಅಥಣಿ ಪಟ್ಟಣದಲ್ಲಿ 73ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷ ತೊರೆಯುವುದು ಆಗಾಗ ಮಾಡುವ ಕಾರ್ಯವಲ್ಲ, ಕಾಂಗ್ರೆಸ್ ಪಕ್ಷ ತೊರೆಯಲು ಸಂದರ್ಭ ಹಾಗೆ ಇತ್ತು.

ರಾಜಕೀಯ ಧ್ರುವೀಕರಣ ಇದ್ದಿದ್ದರಿಂದ ಆ ಘಟನೆ ಸಂಭವಿಸಿದೆ. ಆಗಾಗ ಮಾಡುವಂತಹ ಕಾರ್ಯ ಇದಲ್ಲ. ನಾವೆಲ್ಲರೂ ನಿಷ್ಠಾವಂತರಾಗಿ ಭಾರತೀಯ ಜನತಾ ಪಕ್ಷವನ್ನು ಕಟ್ಟುತ್ತೇವೆ ಎಂದು ತಿಳಿಸಿದರು.

ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ, ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಾವು ಸಾರ್ವತ್ರಿಕ ಚುನಾವಣೆ ಎದರಿಸುತ್ತೇವೆ. ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದರು.

ಅಥಣಿ ತಾಲೂಕಿನಲ್ಲಿ ರಸ್ತೆ ಅಭಿವೃದ್ಧಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅಥಣಿ ಕೊಟ್ಟಲಗಿ ರಸ್ತೆ ಅಭಿವೃದ್ಧಿಗೆ 35 ಕೋಟಿ ರೂಪಾಯಿ ಬಿಡುಗಡೆ ಆಗಿದೆ. ಕಬ್ಬು ಹಂಗಾಮು ಪ್ರಾರಂಭವಾಗಿದೆ. ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿದೆ. ಜಾಗೃತೆಯಿಂದ ವಾಹನ ಸವಾರರು ಚಾಲನೆ ಮಾಡುವಂತೆ ಮನವಿ ಮಾಡಿದರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.