ಅಥಣಿ: ತಾಲೂಕಿನ ಐಗಳಿ ಗ್ರಾಮದಲ್ಲಿ ನಬಾರ್ಡ್ 25ರ ಯೋಜನೆ ಅಡಿಯಲ್ಲಿ ಹೆಚ್ಚುವರಿ ಶಾಲೆ ಕೊಠಡಿಗಳ ನಿರ್ಮಾಣಕ್ಕೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಭೂಮಿ ಪೂಜೆ ನೆರವೇರಿಸಿದರು. ಇದೆ ಸಂದರ್ಭದಲ್ಲಿ ಗ್ರಾಮದ ಕೊರೊನಾ ವಾರಿಯರ್ಸ್ ತಂಡವನ್ನು ಸನ್ಮಾನಿಸಿದರು.
ಇದೆ ವೇಳೆ ಶಾಸಕ ಮಹೇಶ್ ಕುಮಟಳ್ಳಿ ಮಾತನಾಡಿ, ಕೊರೊನಾ ವೈರಸ್ ವಿರುದ್ಧ ಹೋರಾಟ ಮಾಡುತ್ತಿರುವವರಿಗೆ ಸನ್ಮಾನಿಸುವುದು ಬಹಳ ಅರ್ಥಪೂರ್ಣವಾಗಿದೆ. ಸತತ ಐದು ತಿಂಗಳಿಂದ ವೈರಸ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಜೀವದ ಹಂಗು ತೊರೆದು ಹಾಗೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಕೊರೊನಾ ವಾರಿಯರ್ಗಳಿಗೆ ಈ ಸಂದರ್ಭದಲ್ಲಿ ಧನ್ಯವಾದ ಹೇಳಿದರು.
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಗಟ್ಟಿ ನಿಲುವಿನಿಂದ ಭಾರೀ ಅನಾಹುತ ತಪ್ಪಿದೆ. ಈ ಸೋಂಕು ನಿಯಂತ್ರಣದಲ್ಲಿ ಇದೆ ಎಂದು ಅಭಿಪ್ರಾಯಪಟ್ಟರು. ಕೋವಿಡ್-19 ಸೋಂಕಿಗೆ ಔಷಧ ಬರುವವರೆಗೆ ನಾವು ತುಂಬಾ ಜಾಗೃತವಾಗಿರಬೇಕು. ಮುಂದಿನ ದಿನಗಳಲ್ಲಿ ವ್ಯಾಕ್ಸಿನ್ ಬರುವ ವಿಶ್ವಾಸವಿದೆ ಎಂದರು.