ETV Bharat / state

ಸುಳ್ಳು ಹೇಳುವುದೇ ಮೋದಿ ಸರ್ಕಾರದ ಮಹತ್ ಸಾಧನೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ

ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್​​ಗೆ 50 ರೂ. ಆಗಿದ್ದಕ್ಕೆ ಸಿಕ್ಕಸಿಕ್ಕಲ್ಲಿ ಪ್ರತಿಭಟನೆ ಮಾಡಿದ್ದ ಬಿಜೆಪಿ ಮುಖಂಡರು, ಇಂದು ಲೀಟರ್​​​ಗೆ 100 ರೂ. ತಲುಪಿದ್ದರೂ ಬಾಯಿ ಬಿಡುತ್ತಿಲ್ಲ ಎಂದು ಟೀಕಿಸಿದರು. ಗ್ರಾಪಂ ಸದಸ್ಯರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸದಸ್ಯರು ಪಕ್ಷ ಸಂಘಟನೆಯೆ ಜೊತೆಗೆ ಗ್ರಾಮದ ಅಭಿವೃದ್ಧಿಗೂ ಶ್ರಮಿಸಬೇಕು..

MLA Sathish jarkiholi
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
author img

By

Published : Mar 19, 2021, 8:12 PM IST

ರಾಮದುರ್ಗ (ಬೆಳಗಾವಿ) : ಬಿಜೆಪಿ ಸರ್ಕಾರ ನೀಡಿದ ಎಲ್ಲ ಭರವಸೆಗಳು ಹುಸಿಯಾಗಿವೆ. ಸುಳ್ಳು ಹೇಳುವುದೇ‌ ನರೇಂದ್ರ ಮೋದಿ ಸರ್ಕಾರದ ಮಹತ್ ಸಾಧನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಕೇಂದ್ರ‌ದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಮದುರ್ಗ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಿಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೀಸಲಾತಿ ನೀಡುವಂತೆ ಅನೇಕ ಸಮುದಾಯಗಳು ಹೋರಾಟ ಮಾಡುತ್ತಿವೆ. ಆದರೆ, ಕೇಂದ್ರ ಸರ್ಕಾರ ಒಂದೊಂದೇ ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದೆ. ಹೀಗಾದಾಗ ಮೀಸಲಾತಿ ಸೌಲಭ್ಯ ಯಾರಿಗೂ ಲಭಿಸುವುದೇ ಇಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಪ್ರಧಾನಿ ಮೋದಿ ಈ ಹಿಂದೆ ರಾಜ್ಯಕ್ಕೆ ಬಂದಾಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ಹೀಯಾಳಿಸಿದ್ದರು. ಇಂದು ಅವರದ್ದೇ ಪಕ್ಷದ ರಾಜ್ಯ ಸರ್ಕಾರವನ್ನು ಸ್ವಪಕ್ಷದವರೇ 30 ಪರ್ಸೆಂಟ್ ಸರ್ಕಾರ ಎನ್ನುತ್ತಿದ್ದಾರೆ. ಈ ಬಗ್ಗೆ ಮೋದಿಯವರು ಉತ್ತರಿಸಲೇಬೇಕು ಎಂದರು‌.

ಸುಳ್ಳು ಹೇಳಿರುವುದೇ ಮೋದಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಯಾಗಿದೆ. ಇವರು ನೀಡಿದ ಭರವಸೆಗಳೆಲ್ಲ ಹುಸಿಯಾಗಿವೆ. ಕೆಲವು ಅಂಧ ಭಕ್ತರು ಈಗಲೂ ಇವರು ಹೇಳುತ್ತಿರುವ ಸುಳ್ಳುಗಳನ್ನು ನಂಬುತ್ತಿರುವುದಲ್ಲದೇ, ಅವುಗಳ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್​​ಗೆ 50 ರೂ. ಆಗಿದ್ದಕ್ಕೆ ಸಿಕ್ಕಸಿಕ್ಕಲ್ಲಿ ಪ್ರತಿಭಟನೆ ಮಾಡಿದ್ದ ಬಿಜೆಪಿ ಮುಖಂಡರು, ಇಂದು ಲೀಟರ್​​​ಗೆ 100 ರೂ. ತಲುಪಿದ್ದರೂ ಬಾಯಿ ಬಿಡುತ್ತಿಲ್ಲ ಎಂದು ಟೀಕಿಸಿದರು. ಗ್ರಾಪಂ ಸದಸ್ಯರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸದಸ್ಯರು ಪಕ್ಷ ಸಂಘಟನೆಯೆ ಜೊತೆಗೆ ಗ್ರಾಮದ ಅಭಿವೃದ್ಧಿಗೂ ಶ್ರಮಿಸಬೇಕು.

ಅಭಿವೃದ್ಧಿ ಕೆಲಸಗಳ ಮೂಲಕ ತಮ್ಮನ್ನು ಆಯ್ಕೆ ಮಾಡಿರುವ ಜನರ ಪ್ರೀತಿ, ವಿಶ್ವಾಸ ಗಳಿಸಬೇಕು. ಉಪಚುನಾವಣೆ ಜೊತೆಗೆ 2023ಕ್ಕೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಗ್ರಾಪಂ ಸದಸ್ಯರು ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಬೀದಿ ನಾಯಿಗಳ ಪಾಲಿಗೆ ಮಹಾತಾಯಿ 'ರಾಧಿಕಾ ರಾಘವಾನ್'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.