ಬೆಳಗಾವಿ: ಗೋಕಾಕ್ ಕ್ಷೇತ್ರದ ಉಪ ಚುನಾವಣೆಗೆ ಶಾಸಕ ಸತೀಶ್ ಜಾರಕಿಹೊಳಿ ಸಲ್ಲಿಸಿದ್ದ ಎರಡೂ ನಾಮಪತ್ರಗಳು ತಿರಸ್ಕಾರಗೊಂಡಿವೆ.
ಸತೀಶ್ ಜಾರಕಿಹೊಳಿ ನಿನ್ನೆ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಎರಡು ನಾಮಪತ್ರ ಸಲ್ಲಿಸಿದ್ದರು. ಗೋಕಾಕ್ ತಹಶೀಲ್ದಾರ್ ಕಚೇರಿಯಲ್ಲಿ ಇಂದು ನಡೆದ ನಾಮಪತ್ರ ಪರಿಶೀಲನೆ ಪ್ರಕ್ರಿಯೆ ವೇಳೆ ಎರಡೂ ನಾಮಪತ್ರಗಳು ಅಸಿಂಧುಗೊಂಡಿವೆ. ಕಾಂಗ್ರೆಸ್ ಪಕ್ಷದ ಬಿ ಫಾರಂ ಇಲ್ಲದ್ದಕ್ಕೆ ಸತೀಶ್ ಜಾರಕಿಹೊಳಿ ಸಲ್ಲಿಸಿದ್ದ ನಾಮಪತ್ರಗಳು ತಿರಸ್ಕಾರಗೊಂಡಿವೆ. ಕಾಂಗ್ರೆಸ್ ಪಕ್ಷದ ಬಿ ಫಾರಂನೊಂದಿಗೆ ನಾಮಪತ್ರ ಸಲ್ಲಿಸಿದ್ದ ಲಖನ್ ಜಾರಕಿಹೊಳಿ ನಾಮಪತ್ರಗಳು ಸಿಂಧು ಆಗಿವೆ.