ETV Bharat / state

ಬಿಜೆಪಿ ಪಕ್ಷ ಸೇರ್ಪಡೆ ಸಮಯದಲ್ಲಿ ನನಗೆ ಹಣದ ಆಫರ್ ಬಂದಿತ್ತು: ಶ್ರೀಮಂತ ಪಾಟೀಲ್

ಪಕ್ಷ ಸೇರುವಾಗ ನನಗೆ ಹಣದ ಆಫರ್ ಇಟ್ಟಿದ್ದು ನಿಜ, ಆದರೆ ನಾನು ಯಾವುದೇ ದುಡ್ಡು ತೆಗೆದುಕೊಳ್ಳದೇ ನನಗೆ ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ. ಅದರಂತೆ ಅವರು ನನಗೆ ಸಚಿವ ಸ್ಥಾನ ನೀಡಿದ್ದರು ಎಂದು ಶ್ರೀಮಂತ ಪಾಟೀಲ್​​ ಹೇಳಿದ್ದಾರೆ.

ಶಾಸಕ ಶ್ರೀಮಂತ ಪಾಟೀಲ್ ಸ್ಪೋಟಕ ಹೇಳಿಕೆ
ಶಾಸಕ ಶ್ರೀಮಂತ ಪಾಟೀಲ್ ಸ್ಪೋಟಕ ಹೇಳಿಕೆ
author img

By

Published : Sep 11, 2021, 3:00 PM IST

Updated : Sep 11, 2021, 4:54 PM IST

ಚಿಕ್ಕೋಡಿ: ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷ ಸೇರುವಾಗ ನನಗೆ ಹಣದ ಆಫರ್ ಬಂದಿತ್ತು. ಆದರೆ, ನಾನು ಯಾವುದೇ ಹಣ ಬೇಡಿಕೆ ಇಡದೇ, ಸಮಾಜ ಸೇವೆಗೆ ನನಗೆ ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಕಾಮಗಾರಿಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ಬಿಜೆಪಿ ಪಕ್ಷ ಸೇರುವಾಗ ನನಗೆ ಹಣದ ಆಫರ್ ಬಂದಿತ್ತು. ಆದರೆ, ನಾನು ಯಾವುದೇ ದುಡ್ಡು ತೆಗೆದುಕೊಳ್ಳದೇ ನನಗೆ ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ. ಅದರಂತೆ ಅವರು ನನಗೆ ಸಚಿವ ಸ್ಥಾನ ನೀಡಿದ್ದರು. ಸದ್ಯ ಸಚಿವ ಸ್ಥಾನದಿಂದ ಕೈಬಿಟ್ಟಿದ್ದಾರೆ ಮುಂಬರುವ ದಿನದಲ್ಲಿ ಮತ್ತೆ ಸಚಿವ ಸ್ಥಾನ ಕೊಡುತ್ತಾರೆ ಎಂಬ ಭರವಸೆ ಇದೆ ಎಂದರು.

ಶಾಸಕ ಶ್ರೀಮಂತ ಪಾಟೀಲ್ ಸ್ಪೋಟಕ ಹೇಳಿಕೆ

ಈಗ ಸಚಿವ ಸ್ಥಾನ ಸಿಕ್ಕಿಲ್ಲ ಈ ವಿಚಾರದಲ್ಲಿ ಹಿರಿಯ ನಾಯಕರೊಟ್ಟಿಗೆ ಚರ್ಚೆ ಮಾಡಿದ್ದೇನೆ, ಹಾಗೂ ನನಗೆ ಸಚಿವ ಸ್ಥಾನ ನೀಡುವಂತೆ ಮರಾಠ ಸಮುದಾಯ ಕೂಡ ಒತ್ತಾಯ ಮಾಡುತ್ತಿದೆ. ವರಿಷ್ಠರು ಮುಂಬರುವ ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ನನಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ : ಸೆ.13ರಂದು ಬಿಜೆಪಿ ಶಾಸಕಾಂಗ ಸಭೆ: ಅಧಿವೇಶನದಲ್ಲಿ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ಚರ್ಚೆ

Last Updated : Sep 11, 2021, 4:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.