ಚಿಕ್ಕೋಡಿ: ಶಾಸಕ ಗಣೇಶ ಹುಕ್ಕೇರಿ ಇಲ್ಲಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು.
ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸತಾರಾ ಜಿಲ್ಲೆಯ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡಲಾಗಿದೆ. ಇದರಿಂದ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು. ನದಿಯ ಸುತ್ತಲಿನ ಗ್ರಾಮಸ್ಥರು ಪರದಾಡುವಂತಾಗಿದೆ.
ಚಿಕ್ಕೋಡಿ ತಾಲೂಕಿನ ಇಂಗಳಿ, ಯಡೂರ, ಯಡುರವಾಡಿ ಮತ್ತು ಕಲ್ಲೋಳ ಗ್ರಾಮಗಳು ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಯಾವುದೇ ಸಮಸ್ಯೆಗಳು ತಲೆದೂರದಂತೆ ಸೂಕ್ತ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು. ನದಿ ದಡದ ಶಾಲೆಗಳಿಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಕರಿಗೆ ಹೇಳಿದರು.
ಚಿಕ್ಕೋಡಿ ಎಸಿ ರವೀಂದ್ರ ಹಾಗೂ ತಹಸೀಲ್ದಾರ ಸಂತೋಷ ಬಿರಾದರ್ ಶಾಸಕರಿಗೆ ಪ್ರವಾಹ ಪ್ರದೇಶಗಳ ಸಂಪೂರ್ಣ ಮಾಹಿತಿಯನ್ನು ನೀಡಿದರು.