ಬೆಳಗಾವಿ: ಸಿಎಂ ಬಸವರಾಜ ಬೊಮ್ಮಾಯಿಯವರ ಹೇಳಿಕೆಯನ್ನು ಖಂಡಿಸಿ, ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಉದ್ಧಟತನ ಮುಂದುವರೆಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಯವರ ಅಣಕು ಶವಯಾತ್ರೆ ನಡೆಸಿ, ಕರ್ನಾಟಕದ ಮತ್ತೊಂದು ಬಸ್‌ಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ.
ಮಹಾರಾಷ್ಟ್ರದ ಕೊಲ್ಲಾಪುರ ನಗರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಕೊಲ್ಲಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ನೇತೃತ್ವದಲ್ಲಿ ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮಾಡಿದ್ದಾರೆ. ಕರ್ನಾಟಕದ ವಿಜಯಪುರ - ಕೊಲ್ಲಾಪುರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗೆ ಮಸಿ ಬಳಿದಿದ್ದಾರೆ.
ಈ ವೇಳೆ, ಕರ್ನಾಟಕದ ಬಸ್‌ಗೆ ಜೈ ಮಹಾರಾಷ್ಟ್ರ ಅಂತಾ ಬರೆದಿದ್ದು, ಕರ್ನಾಟಕ ಬಸ್‌ಗಳನ್ನ ಕೂಡಲೇ ಬಂದ್ ಮಾಡುವಂತೆ ಘೋಷಣೆ ಹಾಕಿದ್ದಾರೆ. ಅಲ್ಲದೇ ಶಿವಸೇನೆ ಕಾರ್ಯಕರ್ತರ ಈ ನಡೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ 300ಕ್ಕೂ ಹೆಚ್ಚು ಬಸ್ಗಳು ತಾತ್ಕಾಲಿಕ ಸ್ಥಗಿತ!