ETV Bharat / state

ಕಲುಷಿತ ನೀರು ಸೇವನೆ: ಬೆಳಗಾವಿಯಲ್ಲಿ ಐವತ್ತಕ್ಕೂ ಅಧಿಕ ಜನ ಅಸ್ವಸ್ಥ - ಕಲುಷಿತ ನೀರು

ಬೆಳಗಾವಿಯ ರಾಮದುರ್ಗ ‌ತಾಲೂಕಿನ‌ ಮುದೇನೂರು ಗ್ರಾಮದಲ್ಲಿ ‌ಕಲುಷಿತ ನೀರು ಸೇವಿಸಿ, 50ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ.

More than fifty villagers are sick in Belagavi
ಬೆಳಗಾವಿಯಲ್ಲಿ ಐವತ್ತಕ್ಕೂ ಅಧಿಕ ಜನ ಗ್ರಾಮಸ್ಥರು ಅಸ್ವಸ್ಥ
author img

By

Published : Oct 26, 2022, 5:33 PM IST

ಬೆಳಗಾವಿ: ಕಲುಷಿತ ನೀರನ್ನು ಸೇವಿಸಿ 3 ದಿನಗಳ ಅಂತರದಲ್ಲಿ ಐವತ್ತಕ್ಕೂ ಅಧಿಕ ಗ್ರಾಮಸ್ಥರು ಅಸ್ವಸ್ಥಗೊಂಡಿರುವ ಘಟನೆ‌ ಜಿಲ್ಲೆಯ ರಾಮದುರ್ಗ ‌ತಾಲೂಕಿನ‌ ಮುದೇನೂರು ಗ್ರಾಮದಲ್ಲಿ ‌ಘಟನೆ ನಡೆದಿದೆ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಗ್ರಾಮಸ್ಥರು ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಸದ್ಯ ಅಸ್ವಸ್ಥಗೊಂಡಿರುವ ಐವತ್ತಕ್ಕೂ ಅಧಿಕ ಜನರು ರಾಮದುರ್ಗದ ಸರ್ಕಾರಿ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಳಗಳಿಗೆ ನೀರು ಪೂರೈಸುವ ಪೈಪ್ ಲೈನ್ ಒಡೆದು ಚರಂಡಿ ನೀರು ಕುಡಿಯುವ ನೀರಿಗೆ ಸೇರ್ಪಡೆ ಆಗಿದೆ ಎನ್ನಲಾಗ್ತಿದೆ.

ಬೆಳಗಾವಿಯಲ್ಲಿ ಐವತ್ತಕ್ಕೂ ಅಧಿಕ ಜನ ಗ್ರಾಮಸ್ಥರು ಅಸ್ವಸ್ಥ

ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಇನ್ನು, ಘಟನೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಕಲುಷಿತ ನೀರು ಸೇವನೆ: 40ಕ್ಕೂ ಹೆಚ್ಚು ಜನ ಅಸ್ವಸ್ಥ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.