ಚಿಕ್ಕೋಡಿ: ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಪಾಂಗಿರೆ ಗ್ರಾಮದಲ್ಲಿ ನಡೆದಿದೆ.
ಪಾಂಗಿರೆ ಗ್ರಾಮದ ಸರಿತಾ ತಾನಾಜಿ ಶಿಂಧೆ (30) ಗಾಯತ್ರಿ ಶಿಂಧೆ (7) ಸಂಸ್ಕಾರ ಶಿಂಧೆ (4) ಮೃತಪಟ್ಟವರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮಕ್ಕಳನ್ನು ಹಗ್ಗದಿಂದ ನೇಣು ಬಿಗಿದು ನಂತರ ತಾನೂ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಈ ಕುರಿತು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.