ಚಿಕ್ಕೋಡಿ : ಒಂದೂವರೆ ವರ್ಷದ ಗಂಡು ಮಗುವಿನೊಂದಿಗೆ ಗೃಹಿಣಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಚಿಕ್ಕೋಡಿ ತಾಲೂಕಿನ ಕುಂಗಟೋಳ್ಳಿ ಗ್ರಾಮದಲ್ಲಿ ನಡೆದಿದೆ.
ಶಕುಂತಲಾ ಬ್ಯಾಳಿ (31) ಹಾಗೂ ಪುತ್ರ ಭುವನ್ ಮೃತ ದುರ್ದೈವಿಗಳು. ಮನೆಯ ಪಕ್ಕದ ಬಾವಿಗೆ ಗೃಹಿಣಿ ಕಂದನೊಂದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕುಟುಂಬದೊಂದಿಗೆ ಚೆನ್ನಾಗಿಯೇ ಇದ್ದ ಈಕೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಗ್ರಾಮದ ಜನತೆ ಕಣ್ಣೀರು ಹಾಕುತ್ತಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ರಾಯಬಾಗ ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕ ಹುದ್ದೆ ಕಾರ್ಯನಿರ್ವಹಿಸುತ್ತಿದ್ದರು. ಈಕೆಯ ಪತಿ ಕೂಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು ಎಂಬ ಮಾಹಿತಿ ಇದೆ. ಘಟನೆ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.