ಬೆಳಗಾವಿ: ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಈತ ಈ ಹಿಂದೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಘಟನೆ ನಡೆದಿದೆ.
ತಿಗಡಿ ಗ್ರಾಪಂ ಅಧ್ಯಕ್ಷ ಮುನ್ನಾಸಾಬ್ ಬಹಾದ್ದೂರ ಶೇಖ್ (32) ಮೃತ. ನಾಲವಲಗಟ್ಟಿ- ತಿಗಡಿ ರಸ್ತೆ ಮಧ್ಯದಲ್ಲಿರುವ ಜಮೀನಿನಲ್ಲಿ ಈ ಘಟನೆ ನಡೆದಿದೆ.
ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆಸ್ತಿ ವಿವಾದವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಬೈಲಹೊಂಗಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.