ETV Bharat / state

ಮೂರು ಬಸ್ ಗಳಲ್ಲಿ ಫೀವರ್ ಕ್ಲಿನಿಕ್:  ಸಾರಿಗೆ ಇಲಾಖೆಯಿಂದ ವಿನೂತನ ಪ್ರಯೋಗ - Mobile Fever Clinic

ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್​​​​​​ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಮೂರು ಮೊಬೈಲ್ ಫೀವರ್ ಕ್ಲಿನಿಕ್​​ಗಳನ್ನು ಬಳಸಲಾಗುವುದು ಎಂದು ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದರು. ‌

Fever clinic in three buses
ಮೂರು ಬಸ್​​ಗಳಲ್ಲೇ ಫೀವರ್ ಕ್ಲಿನಿಕ್
author img

By

Published : Apr 23, 2020, 3:22 PM IST

ಬೆಳಗಾವಿ: ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್​​ಗಳನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ಲಕ್ಷ್ಮಣ ಸವದಿ ಅವರು ಗುರುವಾರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.

ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದ ಬಳಿಯಲ್ಲಿ ಬಸ್​​ಗಳನ್ನು ಅವರು ಹಸ್ತಾಂತರಿಸಿದರು. ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಈ ಕ್ಲಿನಿಕ್​​ಗಳನ್ನು ಬಳಸಲಾಗುವುದು.‌ ಕಂಟೇನ್ಮೆಂಟ್ ಜೋನ್​​ಗಳಾದ ರಾಯಭಾಗ ತಾಲೂಕಿನ ಕುಡಚಿ ಪಟ್ಟಣ, ಬೆಳಗಾವಿ ತಾಲೂಕಿನ ‌ಹಿರೇಬಾಗೇವಾಡಿ ಹಾಗೂ ಬೆಳಗಾವಿ ನಗರದಲ್ಲಿ ಆರೋಗ್ಯ ಸೇವೆ ದೊರೆಯಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿವರಿಸಿದರು.

ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ‌ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕ ಸತೀಶ್ ಜಾರಕಿಹೊಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.