ಬೆಳಗಾವಿ: ಲೋಕಸಭೆ ಕ್ಷೇತ್ರದ ಉಪಚುನಾವಣೆಗೆ ನನ್ನ ಹೆಸರನ್ನು ಉದ್ದೇಶಪೂರ್ವಕವಾಗಿ ತೇಲಿ ಬಿಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ನನ್ನ ಹೆಸರು ಅಂತಿಮವಾಗಿದೆ ಎಂದು ಸುದ್ದಿ ಹರಡಿದೆ. ಇದನ್ನು ಉದ್ದೇಶಪೂರ್ವಕವಾಗಿ ಮಾಡಿಸುತ್ತಿದ್ದಾರೆ. ಬೆಳಗಾವಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಬೆಂಗಳೂರಿನಲ್ಲಿ ಕುಳಿತು ಹೇಳಲು ಸಾಧ್ಯವಿಲ್ಲ. ಇದಕ್ಕಾಗಿ ಸಮಿತಿ ರಚಿಸಲಾಗಿದೆ. ಇನ್ನೊಂದು ಸಲ ಸಭೆ ನಡೆಸಿ ಬೆಳಗಾವಿಯಲ್ಲೇ ಅಭ್ಯರ್ಥಿ ಅಂತಿಮಗೊಳಿಸಲಾಗುವುದು ಎಂದರು.
ಇದನ್ನೂ ಓದಿ: 'ಸಿದ್ದರಾಮಯ್ಯ, ಡಿಕೆಶಿ ನಿರುದ್ಯೋಗಿಗಳಾಗಿ ರೈತರನ್ನು ಎತ್ತಿ ಕಟ್ಟುತ್ತಿದ್ದಾರೆ'
ಇಂದಿನ ಮುಷ್ಕರ ಕುರಿತು ಪ್ರತಿಕ್ರಿಯಿಸಿ, ಸಾರಿಗೆ ನೌಕರರ ಬೇಡಿಕೆ ಏನಿದೆ ಎಂಬುದು ನಮಗೆ ಗೊತ್ತಿಲ್ಲ. ಅವರ ಬೇಡಿಕೆ ಬಹಳ ವರ್ಷದಿಂದ ಇದೆ. ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸುವ ಅವಶ್ಯಕತೆ ಇದೆ. ಇಲ್ಲದಿದ್ದರೆ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತದೆ ಎಂದರು.