ETV Bharat / state

ನನ್ನ ರಾಜಕೀಯ ಜೀವನ ಬಿಜೆಪಿ ಪಕ್ಷದಲ್ಲಿಯೇ ಅಂತ್ಯವಾಗಲಿದೆ: ರಮೇಶ್​​ ಜಾರಕಿಹೊಳಿ - Belagavi DCC Bank

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತ ಗುದ್ದಾಟ ಆರಂಭವಾಗುತ್ತಿದ್ದಂತೆ, ಇತ್ತ ರಮೇಶ್​ ಜಾರಕಿಹೊಳಿ ಪಕ್ಷ ತೊರೆಯಲಿದ್ದಾರಾ? ಎಂಬ ಅನುಮಾನ ಮೂಡಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಅವರು ನನ್ನ ರಾಜಕೀಯ ಜೀವನ ಬಿಜೆಪಿಯಲ್ಲಿ ಅಂತ್ಯವಾಗಲಿದೆ. ನಾನು ಬಿಜೆಪಿ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

My political career will end in the BJP party only: Ramesh Jarakiholi
ನನ್ನ ರಾಜಕೀಯ ಜೀವನ ಬಿಜೆಪಿ ಪಕ್ಷದಲ್ಲಿಯೇ ಅಂತ್ಯವಾಗಲಿದೆ: ರಮೇಶ್​​ ಜಾರಕಿಹೊಳಿ
author img

By

Published : Jun 16, 2020, 4:41 PM IST

ಚಿಕ್ಕೋಡಿ (ಬೆಳಗಾವಿ): ಸಂಘ ಪರಿವಾರದಲ್ಲಿ ನನಗೆ ಸಿಗುತ್ತಿರುವ ಆಶೀರ್ವಾದವನ್ನು ಕೆಲ ವೈರಿ ಕುತಂತ್ರಿಗಳಿಗೆ ನೋಡಲು ಆಗುತ್ತಿಲ್ಲ. ಅದಕ್ಕಾಗಿ ರಮೇಶ ಜಾರಕಿಹೊಳಿ ಬಿಜೆಪಿ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋಗುತ್ತಾರೆ ಎಂದು ಹೇಳುತ್ತಿದ್ದಾರೆ. ಆದರೆ ನಾನು ಬೇರೆ ಪಕ್ಷಕ್ಕೆ ಹೋಗುವುದಿಲ್ಲ, ನನ್ನ ರಾಜಕೀಯ ಜೀವನ ಇರುವವರೆಗೆ ನಾನು ಬಿಜೆಪಿ ಪಕ್ಷದಲ್ಲಿ ಇರುತ್ತೇನೆ. ನನ್ನ ರಾಜಕೀಯ ಜೀವನ ಬಿಜೆಪಿ ಪಕ್ಷದಲ್ಲೇ ಅಂತ್ಯವಾಗುತ್ತೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ನನ್ನ ರಾಜಕೀಯ ಜೀವನ ಬಿಜೆಪಿ ಪಕ್ಷದಲ್ಲಿಯೇ ಅಂತ್ಯವಾಗಲಿದೆ: ರಮೇಶ್​​ ಜಾರಕಿಹೊಳಿ

ಚಿಕ್ಕೋಡಿಯಲ್ಲಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಯಡಿಯೂರಪ್ಪ ಬದಲಾವಣೆ ಆಗುತ್ತಾರೆ ಎಂಬುವುದು ಸತ್ಯಕ್ಕೆ ದೂರ. ದೇಶದಲ್ಲಿಯೇ ದಕ್ಷತೆಯಿಂದ ಯುವಕರಂತೆ ಯಡಿಯೂರಪ್ಪನವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರನ್ನ ಬದಲಾವಣೆ ಮಾಡುವ ಪ್ರಮೇಯವಿಲ್ಲ ಎಂದರು.

ಮುಂಬರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾಚಣೆಯಲ್ಲಿ ಕತ್ತಿ ಸಹೋದರರು ಹಾಗೂ ಬಾಲಚಂದ್ರ ಜಾರಕಿಹೊಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದರು.

ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ನಾನು 20 ವರ್ಷಗಳ ಬಳಿಕ ಮಂತ್ರಿ ಆಗಿದ್ದೇನೆ. ಅದು ಹಣೆ ಬರಹದಲ್ಲಿ ಇರಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.