ETV Bharat / state

ಚಳಿಗಾಲ ಅಧಿವೇಶನದ ವೇಳೆ ಮತ್ತೆ ಪ್ರತಿಧ್ವನಿಸಲಿದೆ ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು - ಸುವರ್ಣಸೌಧ

ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನದ ವೇಳೆ ಪ್ರತಿಭಟನೆಗಳ ಕಾವು ಹೆಚ್ಚಾಗುವ ಸಾಧ್ಯತೆ ಇದೆ.

ನಾಗೇಶ ಗೋಲಶೆಟ್ಟಿ
ನಾಗೇಶ ಗೋಲಶೆಟ್ಟಿ
author img

By ETV Bharat Karnataka Team

Published : Dec 1, 2023, 5:12 PM IST

ಉತ್ತರ ಕರ್ನಾಟಕ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ ಅವರು ಮಾತನಾಡಿದರು

ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ಪ್ರತಿಭಟನೆಗಳ ಕಾವು ಹೆಚ್ಚಾಗುವ ಸಾಧ್ಯತೆಯಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟಗಾರರು ಸಜ್ಜಾಗಿದ್ದಾರೆ. ಈಗ ಸರ್ಕಾರ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿರುವುದನ್ನು ಖಂಡಿಸಿ ಪ್ರತ್ಯೇಕ ಉತ್ತರ ಕರ್ನಾಟಕ ಕೊಡಿ, ಇಲ್ಲವೇ ಅಭಿವೃದ್ಧಿಪಡಿಸಿ ಎಂದು ಎಚ್ಚರಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಉತ್ತರ ಕರ್ನಾಟಕ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ, ಬೆಳಗಾವಿಯನ್ನು 2ನೇ ರಾಜಧಾನಿಯನ್ನಾಗಿ ಘೋಷಿಸಬೇಕು. ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು. ಕಿತ್ತೂರು ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರ ರಚಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ. 5ರಂದು ಅಧಿವೇಶನದ ವೇಳೆ ಸುವರ್ಣಸೌಧದ ಮುಂದೆ ಈ ಭಾಗದ ಸ್ವಾಮೀಜಿಗಳ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತೇವೆ. ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಹೇಳಿದರು.

ಇನ್ನು ಉತ್ತರಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಗಂಭೀರವಾಗಿ ಚಿಂತಿಸದಿದ್ದರೆ ಮುಂದೊಂದು ದಿನ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಲೇ ಪ್ರತ್ಯೇಕ ರಾಜ್ಯ ಆಗುವ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಈ ವಿಚಾರದಲ್ಲಿ ನಮ್ಮ ಅಜೆಂಡಾ ಬದಲಾವಣೆ ಆಗುವುದಿಲ್ಲ. ಆ ನಿಟ್ಟಿನಲ್ಲಿ 1 ಕೋಟಿ ಜನರ ಅಭಿಪ್ರಾಯ ಸಂಗ್ರಹ ಗುರಿ ಇಟ್ಟುಕೊಂಡಿದ್ದು, ಅದರಲ್ಲಿ 67 ಲಕ್ಷ ಗುರಿ ಮುಟ್ಟಿದ್ದೇವೆ. ಬಹುತೇಕ ಎಲ್ಲರೂ ಉ. ಕ ಪ್ರತ್ಯೇಕತೆ ಬಗ್ಗೆ ಒಲವು ಹೊಂದಿದ್ದಾರೆ ಎಂದು ನಾಗೇಶ ಗೋಲಶೆಟ್ಟಿ ತಿಳಿಸಿದರು.

ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಭೀಮಪ್ಪ ಗಡಾದ ಮಾತನಾಡಿ, ಸಿದ್ದರಾಮಯ್ಯ ಅವರ ಸರ್ಕಾರ ಸಂವಿಧಾನದಡಿ ನಡೆಯುತ್ತಿದ್ದರೆ, ಉಪಮುಖ್ಯಮಂತ್ರಿ ಹುದ್ದೆ ರದ್ದುಪಡಿಸಿ. ನೀವು ಸಾಂಪ್ರದಾಯಿಕವಾಗಿ ಹುದ್ದೆ ನೀಡಿದ್ದರೆ, ಬೆಳಗಾವಿಯ ಸುವರ್ಣಸೌಧಕ್ಕೆ ಒಬ್ಬ ಬೇರೆ ಮುಖ್ಯಮಂತ್ರಿ, ನಾಲ್ಕು ಮಂದಿ ಡಿಸಿಎಂ ಮಾಡಿ. ಈ ತಾರತಮ್ಯ, ಅನ್ಯಾಯ ಸರಿಪಡಿಸದಿದ್ದರೆ ಪ್ರತ್ಯೇಕ ಉ. ಕ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಸಿದರು. ಈ ವೇಳೆ ಹೋರಾಟ ಸಮಿತಿಯ ಪ್ರಕಾಶ ದೇಸಾಯಿ, ಮಾಣಿಕ್ಯಾ ಚಿಲ್ಲೂರ, ಅನ್ನಪೂರ್ಣಾ ನಿರ್ವಾಣಿ, ಶ್ರೀನಿವಾಸಗೌಡ ಪಾಟೀಲ ಇದ್ದರು.

ಹೆಸರಿಗಷ್ಟೇ ಬೆಳಗಾವಿ 2ನೇ ರಾಜಧಾನಿ : ಚಳಿಗಾಲ ಅಧಿವೇಶನಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ. ಉತ್ತರ ಕರ್ನಾಟಕದ ಜನ ಈ ಅಧಿವೇಶನದ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ, ರಾಜಕೀಯ ಸಂಘರ್ಷಕ್ಕೆ ಈ ಅಧಿವೇಶನ ಬಲಿ ಆಗಬಾರದು ಎಂದು (ನವೆಂಬರ್ 29-2023) ಎಚ್ಚರಿಸಿದ್ದರು. ಇನ್ನು ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಅವರು ಈಟಿವಿ ಭಾರತ ಜೊತೆ ಮಾತನಾಡಿ, ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯ ಮಟ್ಟದ ಕಚೇರಿಗಳ ಸ್ಥಳಾಂತರ ಮತ್ತು ಅಧಿಕೃತವಾಗಿ ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಿಸುವ ಬಗ್ಗೆ ಸ್ಪಷ್ಟ ನಿಲುವನ್ನು ಸರ್ಕಾರ ಈ ಅಧಿವೇಶನದಲ್ಲಿ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದರು.

ಇದನ್ನೂ ಓದಿ : ಹೆಸರಿಗಷ್ಟೇ ಬೆಳಗಾವಿ 2ನೇ ರಾಜಧಾನಿ: ಸುವರ್ಣಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರ ಈ ಬಾರಿ ಈಡೇರುತ್ತಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.