ETV Bharat / state

ಖಂಡಿತವಾಗಿಯೂ ರಮೇಶ್ ಜಾರಕಿಹೊಳಿ ಸಚಿವರಾಗುತ್ತಾರೆ: ನಳಿನ್​ಕುಮಾರ್ - ರಮೇಶ್ ಜಾರಕಿಹೊಳಿ

ರಾಜ್ಯದಲ್ಲಿ 150 ಸ್ಥಾನ ಗೆಲ್ಲುವ ಗುರಿಯಿದೆ. ರಮೇಶ್ ಜಾರಕಿಹೊಳಿಯವರು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ರಾಜಕೀಯ ಸನ್ಯಾಸತ್ವ ಕೊಡಿಸುವ ಸಂಕಲ್ಪ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್​ ಹೇಳಿದ್ದಾರೆ ಹೇಳಿದರು.

nalin-kumar-kateel-slams-congress-in-belagavi
ಖಂಡಿತವಾಗಿಯೂ ರಮೇಶ್ ಜಾರಕಿಹೊಳಿ ಸಚಿವರಾಗುತ್ತಾರೆ: ನಳಿನ್​ಕುಮಾರ್
author img

By

Published : Sep 29, 2022, 12:19 PM IST

Updated : Sep 29, 2022, 10:42 PM IST

ಬೆಳಗಾವಿ: ರಮೇಶ್ ಜಾರಕಿಹೊಳಿ ಖಂಡಿತವಾಗಿಯೂ ಮತ್ತೆ ಸಚಿವರಾಗುತ್ತಾರೆ. ಯಾವಾಗ ಆಗಲಿದ್ದಾರೆ ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಹಾಲಿ ಬಿಜೆಪಿ ಶಾಸಕರ‌‌ ಮತಕ್ಷೇತ್ರದಲ್ಲಿ ಅವರನ್ನು ಬದಲಾಯಿಸುವ ಪ್ರಶ್ನೆಯಿಲ್ಲ. ಟಿಕೆಟ್​​ ಆಕಾಂಕ್ಷಿಗಳು ಹೆಚ್ಚಾಗಿದ್ದರೆ, ಅದು ಪಕ್ಷದ ಶಕ್ತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್​ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಬಿಐ, ಐಟಿ ಎಲ್ಲರ ತನಿಖೆ ಮಾಡುತ್ತವೆ. ಪ್ರಾಮಾಣಿಕವಾಗಿದ್ದರೆ ಭಯಪಡುವ ಅವಶ್ಯಕತೆ ಇಲ್ಲ. ಧೈರ್ಯವಾಗಿ ತನಿಖೆಗೆ ತೆರಳಿ ಉತ್ತರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿ‌ವಕುಮಾರ್ ಮನೆ ಮೇಲಿನ ಸಿಬಿಐ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್​​ನವರ ಆಡಳಿತದ ವೇಳೆ ಎಲ್ಲರ ಮೇಲೂ ತನಿಖೆ ಆಗಿದೆ. ಹಾಗಂತ ಎಲ್ಲರೂ ಹೆದರಿದ್ದಾರಾ? ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ 9 ಗಂಟೆಗಳ ಕಾಲ ತನಿಖೆ ಮಾಡಲಾಗಿತ್ತು. ಕೇಂದ್ರ ಗೃಹ ಸಚಿವ ಅಮಿಶ್ ಶಾರನ್ನ ಜೈಲಿಗೆ ಹಾಕಿದ್ದರು. ಆಗ ನಾವು ಪ್ರತಿಭಟನೆ ಮಾಡಿದ್ಧೆವಾ? ಆದರೆ ಇವರ ಸಮಸ್ಯೆ ನೋಡಿ, ಜೈಲಿಗೆ ಹೋಗಿ ಬಂದ ಮೇಲೆಯೂ ಅವರನ್ನು ಮೆರವಣಿಗೆ ಮಾಡಲಾಗುತ್ತದೆ. ಅಲ್ಲದೆ, ಐಟಿ ದಾಳಿ ನಡೆದರೆ ಜನರನ್ನು ಸೇರಿಸಿ ಬೊಬ್ಬೆ ಹಾಕುತ್ತಾರೆ ಎಂದು ಟೀಕಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್​

ಚುನಾವಣೆ ಧಾವಂತ ಇಲ್ಲ: ಗುಜರಾತ್ ಜೊತೆಗೆ ಕರ್ನಾಟಕದಲ್ಲೂ ಡಿಸೆಂಬರ್​​ನಲ್ಲಿ ಚುನಾವಣೆ ನಡೆಯುತ್ತದೆ ಎಂಬ ಪ್ರಶ್ನೆಗೆ, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಬರಲ್ಲ. ನಮ್ಮ ಸರ್ಕಾರದ ಪೂರ್ಣ ಅವಧಿ ಪೂರೈಸುತ್ತವೆ. ನಮಗೆ ಯಾವುದೇ ಚುನಾವಣೆ ಧಾವಂತ ಇಲ್ಲ. ಸಿಎಂ ಆಗುವ ಧಾವಂತ ಇರುವುದು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರಿಗೆ ಎಂದು ನಳಿನ್​ಕುಮಾರ್ ಟಾಂಗ್​ ನೀಡಿದರು.

ಜಾರಕಿಹೊಳಿ‌ ಹೆಸರಿನ ಎಡವಟ್ಟು: ಇದೇ ವೇಳೆ ಮಾತಾಡುವ ಭರಾಟೆಯಲ್ಲಿ ನಮ್ಮದು ಹಾಗೂ ಸತೀಶ್​​ ಜಾರಕಿಹೊಳಿ‌ ಅವರ ಗುರಿ ಒಂದೇ ಇದೆ ಎಂದು ಕಟೀಲ್​​ ಅವರು ಬಾಲಚಂದ್ರ ಜಾರಕಿಹೊಳಿ ಬದಲಾಗಿ ಸತೀಶ್ ಜಾರಕಿಹೊಳಿ ಹೆಸರು ಉಲ್ಲೇಖಿಸಿದರು. ಬಳಿಕ ಎಡವಟ್ಟು ಸರಿ ಮಾಡಿಕೊಂಡ ನಳಿನ್​, ಸತೀಶ್ ಜಾರಕಿಹೊಳಿ ಅವರನ್ನು ಬೈದು ಬೈದು ಅವರ ಹೆಸರೇ ಬಂತು‌ ಅಂತಾ ಹೇಳಿ ಮಾತು ಮುಂದುವರೆಸಿದರು.

ನಮ್ಮದು, ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿಯವರ ಗುರಿ ಒಂದೇ ಇದೆ. ಮುಂದಿನ ಚುನಾವಣೆಯಲ್ಲಿ ಬೆಳಗಾವಿಯಲ್ಲಿ18 ಸ್ಥಾನ ಗೆಲ್ಲುತ್ತೇವೆ. ರಾಜ್ಯದಲ್ಲಿ 150 ಸ್ಥಾನ ಗೆಲ್ಲುವ ಗುರಿಯಿದೆ. ರಮೇಶ್ ಜಾರಕಿಹೊಳಿಯವರು ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ರಾಜಕೀಯ ಸನ್ಯಾಸತ್ವ ಕೊಡಿಸುವ ಸಂಕಲ್ಪ ತೆಗೆದುಕೊಂಡಿದ್ದಾರೆ ಎಂದರು.

ಇದನ್ನೂ ಓದಿ: ನಾಳೆ ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಆಗಮನ: ಕಾಂಗ್ರೆಸ್​ ನಾಯಕರ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

Last Updated : Sep 29, 2022, 10:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.