ಬೆಳಗಾವಿ: ನರೇಂದ್ರ ಮೋದಿ ಐದು ವರ್ಷಗಳ ಕಾಲ ಭ್ರಷ್ಟಾಚಾರ ರಹಿತ ಆಡಳಿತ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಬಿ.ಝಿರಲಿ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಐದು ವರ್ಷಗಳ ಕಾಲ ಅತ್ಯುತ್ತಮ ಡಿಸಿಜನ್ ಮೇಕಿಂಗ್ ಸರ್ಕಾರವನ್ನೇ ಕೊಟ್ಟಿದ್ದಾರೆ. ಮೋದಿ ಸರ್ಕಾರದ ವಿರುದ್ಧ ಒಂದೂ ಭ್ರಷ್ಟಾಚಾರ ಆರೋಪ ಬಂದಿಲ್ಲ. ಪಾರದರ್ಶಕ ಹಾಗೂ ದೇಶದ ಅಭಿವೃದ್ಧಿಗೆ ಪೂರಕವಾದ ಸರ್ಕಾರವನ್ನು ಮೋದಿ ಅವರು ನೀಡಿದ್ದಾರೆ.
ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ಪೂರಕವಾಗಿರುವ ಅಂಶಗಳು ಪ್ರಣಾಳಿಕೆಯಲ್ಲಿವೆ. ಬಿಜೆಪಿ ಮತ್ತೊಮ್ಮೆ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ್ರೆ ಜಮ್ಮು-ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ ಹಿಂಪಡೆಯಲಾಗುವುದು. ಜಮ್ಮು-ಕಾಶ್ಮೀರ ಕೂಡ ಭಾರತದ ಅವಿಭಾಜ್ಯ ಅಂಗವಾಗಿ ಉಳಿಯಲಿದೆ. ರಾಷ್ಟ್ರೀಯ ಏಕತೆ-ಸಮಗ್ರತೆಗೆ ಪೂರಕವಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಕೆಲಸ ಮಾಡಲಿದ್ದಾರೆ. ಮತ್ತೊಮ್ಮೆ ಮೋದಿ ಎಂಬ ಘೋಷವಾಕ್ಯದೊಂದಿಗೆ ಮತ ಕೇಳುತ್ತೇವೆ ಎಂದರು.