ಬೆಳಗಾವಿ: ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಅರಣ್ಯ ಅಧಿಕಾರಿ ಸಿಬ್ಬಂದಿ, ದೇಶದ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಮಾಡಿದ ತ್ಯಾಗ ಬಲಿದಾನಗಳನ್ನು ಸ್ಮರಿಸಿ ನಗರದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ನಗರದ ಅರಣ್ಯ ಅಧಿಕಾರಿ ಕಾರ್ಯಾಲಯದಲ್ಲಿ ಹುತಾತ್ಮ ಅರಣ್ಯ ಅಧಿಕಾರಿಗಳ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಐಎಫ್ಎಸ್ ಅಧಿಕಾರಿ ಪಿ.ಬಿ. ಕರುಣಾಕರ್, ದೇಶದಲ್ಲಿ ಅರಣ್ಯ ಅಧಿಕಾರಿಗಳ ತ್ಯಾಗ ಬಲಿದಾನದಿಂದ ನಮ್ಮ ಪರಿಸರ ಇಂದಿಗೂ ಸಮೃದ್ಧವಾಗಿ ಉಳಿದುಕೊಂಡಿದೆ. ಅರಣ್ಯ ಹಾಗೂ ವಣ್ಯ ಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನು ಮುಡಿಪಾಗಿಟ್ಟು ಕೆಲಸ ಮಾಡುವ ಎಲ್ಲಾ ಅರಣ್ಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ನಂತರ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಹುತಾತ್ಮ ಅಧಿಕಾರಿಗಳ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಆಕರ್ಷಕ ಪಥ ಸಂಚಲನ ನಡೆಸಲಾಯಿತು.