ETV Bharat / state

ಕರ್ನಾಟಕದಲ್ಲಿ ರಾಷ್ಟ್ರೀಯ ಯುವಜನೋತ್ಸವ, ಉದ್ಘಾಟನೆಗೆ ಪ್ರಧಾನಿ ಆಗಮನ: ಸಿಎಂ ಬೊಮ್ಮಾಯಿ

ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ ನಡೆಯುವ ರಾಷ್ಟ್ರೀಯ ಯುವಜನೋತ್ಸವ ಈ ಬಾರಿ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿದ್ದು, ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

national-youth-festival-to-be-held-in-karnataka-prime-minister-arrives-for-inauguration
ಕರ್ನಾಟಕದಲ್ಲಿ ರಾಷ್ಟ್ರೀಯ ಯುವಜನೋತ್ಸವ, ಉದ್ಘಾಟನೆಗೆ ಪ್ರಧಾನಿ ಆಗಮನ: ಸಿಎಂ ಬೊಮ್ಮಾಯಿ
author img

By

Published : Dec 21, 2022, 10:13 PM IST

ಕರ್ನಾಟಕದಲ್ಲಿ ರಾಷ್ಟ್ರೀಯ ಯುವಜನೋತ್ಸವ, ಉದ್ಘಾಟನೆಗೆ ಪ್ರಧಾನಿ ಆಗಮನ: ಸಿಎಂ ಬೊಮ್ಮಾಯಿ

ಬೆಳಗಾವಿ: ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ಯವನ್ನು ಕರ್ನಾಟಕ ವಹಿಸಿಕೊಂಡಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುವರ್ಣಸೌಧದಲ್ಲಿ ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದು, ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧಪಡಿಸಲು ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯಕ್ಕೆ ಈ ಅವಕಾಶ ದೊರೆತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಯುವ ಸಬಲೀಕರಣ ಸಚಿವ ಅನುರಾಗ್ ಠಾಕೂರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕ್ರೀಡಾ ಸಚಿವರಾದ ನಾರಾಯಣಗೌಡ, ಕಂದಾಯ ಸಚಿವ ಆರ್. ಅಶೋಕ್, ನಗರಾಭಿವೃದ್ಧಿ ಸಚಿವ ಬಸವರಾಜ ಭೈರತಿ, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಇಲಾಖಾ ಕಾರ್ಯದರ್ಶಿಗಳೂ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಕೋವಿಡ್ ಕುರಿತು ಕೇಂದ್ರದ ಎಚ್ಚರಿಕೆ.. ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ಕರೆದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.