ಚಿಕ್ಕೋಡಿ(ಬೆಳಗಾವಿ): ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಈ ಬಾರಿಯೂ ಪ್ರವಾಹ ಬರುವ ಮುನ್ಸೂಚನೆ ನೀಡಿದ್ದು, ಇದರಿಂದ ಎಚ್ಚೆತ್ತ ಬೆಳಗಾವಿ ಜಿಲ್ಲಾಡಳಿತ ಕೃಷ್ಣಾ ನದಿ ತೀರದಲ್ಲಿ ಎನ್‌ಡಿಆರ್‌ಎಫ್ ತಂಡವನ್ನು ನಿಯೋಜನೆ ಮಾಡಿದೆ.
ಈಗಾಗಲೇ 25 ಸಿಬ್ಬಂದಿ ಇರುವ ಎನ್‌ಡಿಆರ್‌ಎಫ್ ತಂಡ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ನಿಯೋಜನೆಗೊಂಡಿದ್ದು, ಪ್ರವಾಹವನ್ನ ಹೇಗೆ ಎದುರಿಸಬೇಕು ಎನ್ನುವ ಕುರಿತು ಸ್ಥಳೀಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದೆ.
ಮುಂದಿನ ದಿನಗಳಲ್ಲಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೃಷ್ಣಾ ನದಿ ತೀರದಲ್ಲಿ ಎನ್‌ಡಿಆರ್‌ಎಫ್ ತಂಡ ನಿಯೋಜನೆ ಮಾಡಲಾಗಿದೆ.