ETV Bharat / state

ಹಾಳಾದ ಬೆಳೆಯನ್ನು ಕೈಯಲ್ಲಿಡಿದು ಅನ್ನದಾತರ ಪ್ರತಿಭಟನೆ: ಸಮಸ್ಯೆ ಆಲಿಸಿದ ಬೆಳಗಾವಿ ಜಿಲ್ಲಾಧಿಕಾರಿ - etv bharat kannada

ಬೆಳಗಾವಿ ಮತ್ತು ಖಾನಾಪುರವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ, ಬೆಳೆ ಹಾನಿಗೆ ಸೂಕ್ತ ಪರಿಹಾರ ಘೋಷಿಸುವಂತೆ ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದಿಂದ ಪ್ರತಿಭಟನೆ ನಡೆಯಿತು.

negilayogi-seve-sangha-protest-with-damaged-crops-in-belagavi
ಹಾಳಾದ ಬೆಳೆಯನ್ನು ಕೈಯಲ್ಲಿಡಿದು ಅನ್ನದಾತರ ಪ್ರತಿಭಟನೆ: ಸಮಸ್ಯೆ ಆಲಿಸಿದ ಬೆಳಗಾವಿ ಜಿಲ್ಲಾಧಿಕಾರಿ
author img

By ETV Bharat Karnataka Team

Published : Sep 25, 2023, 6:50 PM IST

ಹಾನಿಯಾದ ಬೆಳೆಗಳನ್ನು ಕೈಯಲ್ಲಿಡಿದು ಅನ್ನದಾತರ ಪ್ರತಿಭಟನೆ

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಅನ್ನದಾತರು ಸಂಕಷ್ಟದಲ್ಲಿದ್ದಾರೆ. ಮಳೆ ಅಭಾವದಿಂದ ಸಾಲ ಸೂಲ ಮಾಡಿ ಬೆಳೆ ಬಿತ್ತಿದ್ದ ರೈತರು ಕಂಗಾಲಾಗಿದ್ದಾರೆ. ಇನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈ ಬಿಟ್ಟಿರುವ ಬೆಳಗಾವಿ ಮತ್ತು ಖಾನಾಪುರವನ್ನು ಪಟ್ಟಿಗೆ ಸೇರಿಸಿ, ಬೆಳೆ ಹಾನಿಗೆ ಸೂಕ್ತ ಪರಿಹಾರ ಘೋಷಿಸುವಂತೆ ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದಿಂದ ಪ್ರತಿಭಟನೆ ನಡೆಯಿತು.

ಹಾಳಾದ ಭತ್ತ, ಆಲೂಗಡ್ಡೆ, ಗೆಣಸು ಸೇರಿ ಇನ್ನಿತರ ಬೆಳೆಗಳನ್ನು ಕೈಯಲ್ಲಿ ಹಿಡಿದುಕೊಂಡು ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದರು. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಜಿಲ್ಲೆಯ ಎರಡು ತಾಲೂಕು ಕೈ ಬಿಟ್ಟಿರುವ ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆಗಮಿಸಿ ರೈತ ಮುಖಂಡರ ಸಮಸ್ಯೆ ಆಲಿಸಿದರು. ಕೂಡಲೇ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು. ಅಲ್ಲಿಯವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ನೇಗಿಲಯೋಗಿ ರೈತ ಸೇವಾ ಸಂಘದ ರಾಜ್ಯಾಧ್ಯಕ್ಷ ರವಿ ಪಾಟೀಲ ಮಾತನಾಡಿ, ಎನ್​ಡಿಆರ್​ಎಫ್ ಕಾಯಿದೆ ಪ್ರಕಾರ ರೈತರು 1 ಲಕ್ಷ ರೂ. ಖರ್ಚು ಮಾಡಿದರೆ, ಶೇ.60ರಷ್ಟು ಪರಿಹಾರ ನೀಡಬೇಕೆಂದು ನಿಯಮವಿದೆ. ಆದರೆ, ತಹಶೀಲ್ದಾರ್ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಸಿ ಅವರಿಗೆ ವರದಿ ನೀಡಬೇಕಿತ್ತು. ಆ ಕೆಲಸವನ್ನು ಇವರು ಮಾಡಿಲ್ಲ. ಹಾಗಾಗಿ ಜನಪ್ರತಿನಿಧಿಗಳು ಹಾನಿಗೊಳಗಾದ ರೈತರಿಗೆ ಯೋಗ್ಯ ಪರಿಹಾರ ನೀಡಿ, ಲೋಕಸಭೆ ಚುನಾವಣೆಗೆ ಮತ ಕೇಳಲು ನಮ್ಮ ಮನೆಗೆ ಬರಬೇಕು ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಖಾನಾಪುರ ಮತ್ತು ಬೆಳಗಾವಿ ತಾಲೂಕುಗಳಲ್ಲಿ ಬೆಳೆಗಳು ಮೇಲ್ನೋಟಕ್ಕೆ ಹಸಿರು ಕಾಣಿಸುತ್ತಿವೆ. ಆದರೆ, ಒಳಗಡೆ ಬೆಳೆದಿಲ್ಲ ಎಂಬುದು ತಿಳಿದು ಬಂದಿದೆ. ಮತ್ತೊಮ್ಮೆ ಬೆಳೆ ಹಾನಿ ಸಮೀಕ್ಷೆ ಮಾಡಿ, ಹೊಸ ವರದಿಯನ್ನು ಸರ್ಕಾರಕ್ಕೆ ಕಳಿಸಿ ಕೊಡುತ್ತೇವೆ. ಈ ಎರಡೂ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಪ್ರಸ್ತಾವನೆ ಸಲ್ಲಿಸುತ್ತೇವೆ. ಹಾಗಾಗಿ ರೈತ ಮುಖಂಡರು ಪ್ರತಿಭಟನೆ ವಾಪಸ್​ ಪಡೆದಿದ್ದಾರೆ ಎಂದರು.

ಶಿವಮೊಗ್ಗದಲ್ಲೂ ಪ್ರತಿಭಟನೆ: ಮತ್ತೊಂದೆಡೆ, ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಧರಣಿ ಸತ್ಯಾಗ್ರಹ ನಡೆಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ, ಕರ್ನಾಟಕದಲ್ಲಿ ಭೀಕರವಾದ ಬರಗಾಲವಿದೆ. ಇವತ್ತು 195 ತಾಲೂಕುಗಳನ್ನು ಘೋಷಣೆ ಮಾಡಿರುವುದು ಸಾಲದು, ರಾಜ್ಯದ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: Cauvery issue: ಯಾಕೆ ಸತ್ಯ ಮುಚ್ಚಿಟ್ಟಿದ್ದೀರಿ, ವಾಸ್ತವಾಂಶ ಬಹಿರಂಗಪಡಿಸಿ: ಡಿಕೆಶಿಗೆ ಹೆಚ್​ಡಿಕೆ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.