ETV Bharat / state

ಅತಿವೃಷ್ಟಿಗೆ ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ ಪ್ರಯಾಣ: ಸಿಎಂ

ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲಾ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ‌ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Aug 25, 2020, 12:56 PM IST

ಬೆಳಗಾವಿ: ಶೀಘ್ರ ಎಲ್ಲಾ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲಾ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ‌ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಅತಿವೃಷ್ಟಿಗೆ ಸಂಬಂಧಿಸಿದಂತೆ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-19 ಹಿನ್ನೆಲೆಯಲ್ಲಿ ಎನ್​ಡಿಆರ್​ಎಫ್​ ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಇದೆ. ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದರು.

ಇದೇ ರೀತಿ ಇತರೆ ಜಿಲ್ಲೆಗಳಲ್ಲಿ ಸಾಕಷ್ಟು ಹಣ ಲಭ್ಯವಿದೆ. ಮನೆ ಕಳೆದುಕೊಂಡಿರುವ ಬೆಳಗಾವಿಯ 44,156 ಫಲಾನುಭವಿಗಳಿಗೆ 488 ಕೋಟಿ ಪರಿಹಾರ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿ-ಧಾರವಾಡ ಸಮಸ್ಯೆಗಳನ್ನು ಗಮನಕ್ಕೆ ಬಂದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಪ್ರವಾಹ ಸ್ಥಿತಿಗತಿಯ ಬಗ್ಗೆ ಮಾತನಾಡಿದರು. ಕಂದಾಯ ಸಚಿವರಾದ ಆರ್. ಅಶೋಕ್, ಕಳೆದ ವರ್ಷದ ಮನೆಪರಿಹಾರ ನೀಡುವ ತಂತ್ರಾಂಶ ಪುನಃ ಆರಂಭಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಪ್ರವಾಹ‌ ನಿರ್ವಹಣೆ ಮತ್ತು ಪರಿಹಾರ ಕ್ರಮಗಳ ಬಗ್ಗೆ ಮಾತನಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.