ಬೆಳಗಾವಿ : ಕೊರೊನಾ ವಿರುದ್ಧದ ಹೋರಾಟಕ್ಕೆ ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಸಿಎಂ ಪರಿಹಾರ ನಿಧಿಗೆ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಅಂಜಲಿ ಚೆಕ್ ಮೂಲಕ ಹಣ ನೀಡಿರುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕರು ನೀಡುತ್ತಿರುವ ನೆರವಿನ ಹಣವನ್ನು ಸಂಗ್ರಹಿಸಿ ಡಿಕೆಶಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಲುಪಿಸಲಿದ್ದಾರೆ.
ಲಾಕ್ಡೌನ್ ಆದೇಶವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೊನಾ ಸೋಂಕು ಹರಡದಂತೆ ಜಾಗೃತರಾಗಬೇಕು. ಸ್ವಯಂ ನಿರ್ಬಂಧದಿಂದ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯವಾಗಿದೆ. ಸರ್ಕಾರದ ಆದೇಶಗಳನ್ನು ಖಾನಾಪುರ ಕ್ಷೇತ್ರದ ಜನತೆ ಪಾಲಿಸಬೇಕು ಎಂದು ಶಾಸಕಿ ಅಂಜಲಿ ನಿಂಬಾಳ್ಕರ್ ಮನವಿ ಮಾಡಿದ್ದಾರೆ.