ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಹಿರೇಬಾಗೇವಾಡಿ ಗ್ರಾಮದ 9 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹಾಗಾಗಿ ಇಂದು ಆಸ್ಪತ್ರೆಯಿಂದ ಅವರನ್ನು ಬಿಡುಗಡೆ ಮಾಡಲಾಯಿತು.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ನಿವಾಸಿಗಳು ಕೊರೊನಾದಿಂದ ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.
ತಬ್ಲಿಘಿಗಳ ಸಂಪರ್ಕ ಹೊಂದಿದಕ್ಕೆ P-545, P-700, P- 713, P-714, P-715, P-718, P-720, P-722, P-719 ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಎಲ್ಲರೂ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.