ಬೆಳಗಾವಿ: ರಾಜ್ಯ ಸರ್ಕಾರ ಆದಷ್ಟು ಬೇಗ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಒದಗಿಸಬೇಕು. ಇಲ್ಲವಾದರೆ ಮುಂಬರುವ ದಿನದಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಕಾಗಿನೆಲೆ ಗುರಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುರುಬ ಸಮುದಾಯವನ್ನು ಯಾರು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಆದಷ್ಟು ಬೇಗ ಕುರುಬ ಸಮುದಾಯವನ್ನು ಎಸ್‍ಟಿಗೆ ಸೇರಿಸಬೇಕು. ಈಗಾಗಲೇ ಸಮಾಜದ ಮುಖಂಡರ ನೇತೃತ್ವದಲ್ಲಿ ಕೇಂದ್ರ ಸಚಿವರು, ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದೇವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಹೋರಾಟವನ್ನು ಮತ್ತಷ್ಟು ತೀವ್ರತರಗೊಳಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಹೋರಾಟ ಹಮ್ಮಿಕೊಂಡಿದ್ದೇವೆ. ಅದಕ್ಕಾಗಿಯೇ ಜ. 15ರಂದು ಸೂರ್ಯ ತನ್ನ ದಿಕ್ಕನ್ನು ಬದಲಾಯಿಸುವ ಸಂಕ್ರಮಣ ದಿನದಂದು ಕುರುಬರ ದಿಕ್ಕನ್ನು ಬದಲಾಯಿಸಲಿ ಎಂಬ ಆಲೋಚನೆ ಇಟ್ಟುಕೊಂಡು ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಸುಮಾರು 340 ಕಿ.ಮೀ. ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.
ಇದನ್ನೂ ಓದಿ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕುರುಬ ಶ್ರೀಗಳ ನಿಯೋಗದಿಂದ ಸಿಎಂಗೆ ಮನವಿ