ಬೆಳಗಾವಿ: ಶಿವಸೇನೆಯ ಕೊಲ್ಲಾಪುರ ಜಿಲ್ಲಾಧ್ಯಕ್ಷ ವಿಜಯ್ ದಾವಣೆ ಮತ್ತು ಶಿವಸೇನೆ ಕಾರ್ಯಕರ್ತರಿಗೆ ಬೆಳಗಾವಿ ಗಡಿ ಪ್ರವೇಶಕ್ಕೆ ನಿಷೇಧ ಹೇರಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.
ಇಂದು ಬೆಳಗ್ಗೆ ಶಿವಸೇನೆ ಪುಂಡರು ರಾಜ್ಯಕ್ಕೆ ನುಗ್ಗಲು ಯತ್ನ ಮಾಡಿದ್ದರು. ಹೀಗಾಗಿ ಬೆಳಗಾವಿಯಲ್ಲಿ ಭಾಷಾ ಸೌಹಾರ್ದತೆೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಲು ಈ ಕ್ರಮ ಜರುಗಿಸಲಾಗಿದೆ. ಬೆಳಗಾವಿ ಪೊಲೀಸರನ್ನು ತಳ್ಳಿ ಶಿವಸೇನೆ ಪುಂಡರು ಗಡಿಗೆ ಪ್ರವೇಶಿಸಲು ಯತ್ನಿಸಿದ್ದರು. ಈ ವೇಳೆ ಬೆಳಗಾವಿ ಪೊಲೀಸರು ಅವರ ಯತ್ನ ವಿಫಲಗೊಳಿಸಿ ವಾಪಸ್ ಕಳಿಸುವಲ್ಲಿ ಯಶಸ್ವಿಯಾಗಿದ್ದರು.
ಓದಿ: ಶಿವಸೇನೆ ಕಾರ್ಯಕರ್ತರ ಉದ್ಧಟತನ: ಗಡಿಯಲ್ಲಿ ಪೊಲೀಸ್ ಬಿಗಿ ಭದ್ರತೆ
ಗಡಿಯಲ್ಲಿ ಶಿವಸೇನೆ ಪುಂಡರ ಗಲಾಟೆ ಹಿನ್ನೆಲೆಯಲ್ಲಿ ಶಿನ್ನೋಳ್ಳಿ ಚೆಕ್ ಪೋಸ್ಟ್ಗೆ ಡಿಸಿಪಿ ವಿಕ್ರಂ ಆಮಟೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದ್ದು, ಸ್ಥಳದಲ್ಲೇ ಇದ್ದು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ.