ಚಿಕ್ಕೋಡಿ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ವಿವಾದಿತ ಪೌರತ್ವ ಕಾಯ್ದೆಯ ವಿರುದ್ಧ ದೇಶದ ಹಲವೆಡೆ ಉಗ್ರ ಸ್ವರೂಪದ ಪ್ರತಿಭಟನೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತ ಸಂತ ಇಬ್ರಾಹಿಂ ಸುತಾರ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ದೇಶದ ಜನತೆಗೆ ಶಾಂತಿ ಸಾರುವ ಸಂದೇಶ ಹಂಚಿಕೊಂಡಿದ್ದಾರೆ.
ಕೇಂದ್ರದ ಪೌರತ್ವ ಕಾಯ್ದೆಯಿಂದ ಭಾರತೀಯ ನಾಗರಿಕರಿಗೆ ಯಾವುದೇ ಸಮಸ್ಯೆ ಇಲ್ಲ. ಯಾವ ಭಾರತೀಯ ಮುಸಲ್ಮಾನರಿಗೂ ಪೌರತ್ವ ಕಾಯಿದೆಯಿಂದ ತೊಂದರೆಯಾಗುವುದಿಲ್ಲ. ಸಮಾಜದಲ್ಲಿ ಯೂರೂ ಕೂಡಾ ಸುಳ್ಳು ಸುದ್ದಿ ಹಬ್ಬಿಸಬಾರದು. ನಾವೆಲ್ಲರೂ ಭಾರತೀಯರು ಎಂದು ತಮ್ಮ ಫೇಸ್ಬುಕ್ ಖಾತೆಯಿಂದ ವಿನಂತಿಸಿಕೊಂಡಿದ್ದಾರೆ.