ಬೆಳಗಾವಿ: ವಾಯವ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಿಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಗಾವಿ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಚೆನ್ನಮ್ಮ ವೃತ್ತದ ಬಳಿಯಿರುವ ಗಣಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಶಿಕ್ಷಕ ಕ್ಷೇತ್ರಕ್ಕೆ ಅರುಣ್ ಶಹಾಪುರ ಹಾಗೂ ಪದವೀಧರ ಕ್ಷೇತ್ರಕ್ಕೆ ಹನುಮಂತ ನಿರಾಣಿ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿಗಳಿಗೆ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಮಾಜಿ ಸಚಿವ ರಮೇಶ ಜಾರಕಿಹೊಳಿ, ಸಂಸದರಾದ ರಮೇಶ್ ಜಿಗಜಿಣಗಿ, ಅಣ್ಣಾಸಾಹೇಬ್ ಜೊಲ್ಲೆ, ಮಂಗಲ್ ಅಂಗಡಿ ಸೇರಿ ಹಲವರು ಸಾಥ್ ನೀಡಿದ್ದಾರೆ.
ಅಧ್ಯಕ್ಷರು ಬಂದಿದಕ್ಕೆ ಸಭೆಗೆ ಬಂದಿದ್ದೇನೆ: ನಾಮಪತ್ರ ಸಲ್ಲಿಕೆಗೂ ಮುನ್ನ ನಳಿನ್ ಕುಮಾರ್ ಕಟೀಲ್ ಜಿಲ್ಲಾ ನಾಯಕರ ಜೊತೆಗೆ ಸಭೆ ನಡೆಸಿದರು. ಸಭೆಯಲ್ಲಿ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಶ್ರೀಮಂತ ಪಾಟೀಲ ಅಕ್ಕಪಕ್ಕವೇ ಕುಳಿತಿದ್ದರು. ಸಭೆಗೆ ಬರಲ್ಲ ಅಂದಿದ್ರಿ ಅಂತ ಶ್ರೀಮಂತ ಪಾಟೀಲ ಅವರು ರಮೇಶ್ ಜಾರಕಿಹೊಳಿ ಅವರನ್ನು ಪ್ರಶ್ನಿಸಿದಾಗ, ಅಧ್ಯಕ್ಷರು ಬಂದಿದ್ದಾರೆ, ಅದಕ್ಕೆ ಬಂದಿದ್ದೇನೆ. ಇಲ್ಲವಾದರೆ ಬರ್ತಿರಲಿಲ್ಲ ಎಂದು ಹೇಳಿದ್ದಾರೆ.
ಓದಿ : ಬಿಜೆಪಿ ಸರ್ಕಾರಕ್ಕೆ ಒಂಬತ್ತು ತಿಂಗಳಷ್ಟೇ ಆಯಸ್ಸು.. ನಂತ್ರ ನಮ್ದೇ ಸರ್ಕಾರ: ಸಿ.ಎಂ. ಇಬ್ರಾಹಿಂ